Uncategorized

ಕರ್ನಾಟಕದಲ್ಲಿ ಅನಿವಾಸಿ ಭಾರತೀಯ ಇಲಾಖೆ ಸ್ಥಾಪನೆಗೆ ಸರ್ಕಾರದ ನಿರ್ಧಾರ; ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ

Share

ರಾಜ್ಯದಲ್ಲಿ ಅನಿವಾಸಿ ಭಾರತೀಯ ಇಲಾಖೆ ಸ್ಥಾಪಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ 10ಕ್ಕೂ ಹೆಚ್ಚು ಅನಿವಾಸಿ ಭಾರತೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು.

ವಿದೇಶದಲ್ಲಿ ನೆಲೆಸಿರುವ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು, ಬಂಡವಾಳ ಕ್ರೂಢೀಕರಣ, ಕೌಶಲ್ಯ ಅಭಿವೃದ್ಧಿ, ಉದ್ಯೋಗ ಸೃಷ್ಟಿ, ವ್ಯಾಪಾರ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಈ ಇಲಾಖೆಯ ಪ್ರಮುಖ ಉದ್ದೇಶಗಳಾಗಿವೆ. ತಮಿಳುನಾಡು, ಕೇರಳ ಮತ್ತು ಪಂಜಾಬ್ ರಾಜ್ಯಗಳ ಮಾದರಿಯಲ್ಲಿ ಈ ಇಲಾಖೆಯನ್ನು ರೂಪಿಸಲಾಗುತ್ತಿದೆ. ವಿದೇಶದಲ್ಲಿ ಕಾನೂನು ಸಮಸ್ಯೆಗಳು, ಪಾಸ್‌ಪೋರ್ಟ್ ತೊಂದರೆಗಳು, ಮರಣದಂತಹ ಸಂದರ್ಭಗಳಲ್ಲಿ ನೆರವು ನೀಡಲು ಇಲಾಖೆ ಕಾರ್ಯನಿರ್ವಹಿಸಲಿದೆ. ಅನಿವಾಸಿ ಕನ್ನಡಿಗರ ದೂರುಗಳನ್ನು ಪರಿಹರಿಸಲು ಪ್ರತ್ಯೇಕ ವಿಚಾರಣಾ ಡೆಸ್ಕ್ ರಚಿಸುವ ಸಾಧ್ಯತೆಗಳೂ ಇವೆ. ಸುಮಾರು 50 ಲಕ್ಷ ಅನಿವಾಸಿ ಭಾರತೀಯರಿಗೆ ನೆರವು ನೀಡುವ ಗುರಿಯನ್ನು ಇಲಾಖೆ ಹೊಂದಿದೆ. ಈ ನಿರ್ಧಾರದಿಂದ ರಾಜ್ಯಕ್ಕೆ ವಿದೇಶಿ ವಿನಿಮಯ ಹೆಚ್ಚಳವಾಗುವ ನಿರೀಕ್ಷೆಯಿದೆ. ಅನಿವಾಸಿ ಕನ್ನಡಿಗರ ಬಹು ವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಇದು ಮುಖ್ಯಮಂತ್ರಿಗಳ ಆರನೇ ಗ್ಯಾರಂಟಿಗಳಲ್ಲಿ ಒಂದಾಗಿದೆ ಎಂದು ಅನಿವಾಸಿ ಭಾರತೀಯ ಸಂಘಟನೆಗಳು ಸಂತಸ ವ್ಯಕ್ತಪಡಿಸಿವೆ.

Tags:

error: Content is protected !!