ಬೆಳಗಾವಿಯ ಪ್ರತಿಷ್ಠಿತ ಕೆಎಲ್‌ಎಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ನೂತನ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ (ಇನ್ವೆಸ್ಟಿಚರ್) ಕಾರ್ಯಕ್ರಮವು ಅತ್ಯಂತ ಸಡಗರದಿಂದ ಜರುಗಿದೆ. ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ನಾರಾಯಣ್ ಬರಮನಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿದ್ಯಾರ್ಥಿ ನಾಯಕರಿಗೆ ಜವಾಬ್ದಾರಿಯ ದೀಕ್ಷೆ ನೀಡಿದ್ದಾರೆ.

ಬೆಳಗಾವಿಯ ಕೆಎಲ್‌ಎಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾದ (DCP) ನಾರಾಯಣ್ ಬರಮನಿ, ಕೆಎಸ್ಪಿ ಎಸ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಲ್‌ಎಸ್ ಶಾಲೆಯ ಚೇರ್ಮನ್ ಆದ ಪಿ. ಜಿ. ಬಡಕುಂದ್ರಿ ಅವರು ವಹಿಸಿ, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳುವಂತೆ ಪ್ರೇರೇಪಿಸಿದರು. ಶಾಲಾ ನೂತನ ಸಂಸತ್ತಿಗೆ ಆಯ್ಕೆಯಾದ ನಾಯಕರು ಈ ಸಂದರ್ಭದಲ್ಲಿ ಶಿಸ್ತು ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವುದಾಗಿ ಪ್ರಮಾಣ ಮಾಡಿದ್ದು, ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

