Vijaypura

ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಸಿರು ಸೇನೆ ಮನವಿ

Share

ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಿ ಹೆಸ್ಕಾಂ ವ್ಯಾಪ್ತಿಯಲ್ಲಿ ಟಾಟಾ ಪವರ್ ಸೇರಿದಂತೆ ಖಾಸಗಿ ಸಂಸ್ಥೆಗಳಿಗೆ ಪರವಾನಿಗೆ ನೀಡುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ತಹಶೀಲ್ದಾರ್ ಹಾಗೂ ಹೆಸ್ಕಾಂ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಘದ ಮುಖಂಡರು, ವಿದ್ಯುತ್ ಖಾಸಗೀಕರಣದಿಂದ ರೈತರು, ಗ್ರಾಹಕರು ಮತ್ತು ನೌಕರರ ಹಿತಕ್ಕೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಸರ್ಕಾರ ಖಾಸಗೀಕರಣ ನಿರ್ಧಾರ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ತಾಲೂಕು ಅಧ್ಯಕ್ಷ ಸುರೇಶ ಕಿರೆಸೂರ, ಹಿರಿಯ ರೈತ ಮುಖಂಡರಾದ ಸುರೇಶ ಶಿರಬೂರ, ಬಸಂತ ಕಾಂಬಳೆ ಸೇರಿದಂತೆ ಹಲವರು ರೈತರಿಗೆ ಉಚಿತ ವಿದ್ಯುತ್ ಸೇರಿದಂತೆ ವಿವಿಧ ಜನಪರ ಯೋಜನೆಗಳಿಗೆ ಖಾಸಗೀಕರಣದಿಂದ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಗುಣದಾಳದ ಪ.ಪೂ. ಷ.ಬ್ರ. ವಿವೇಕ ದೇವರು ಆಶೀರ್ವಚನ ನೀಡಿ, ರೈತರೇ ದೇಶದ ಅನ್ನದಾತರು ಎಂದು ಹೇಳಿ ವಿದ್ಯುತ್ ಖಾಸಗೀಕರಣಕ್ಕೆ ವಿರೋಧ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ರೈತ ಮುಖಂಡರು, ಮಹಿಳೆಯರು ಹಾಗೂ ನೂರಕ್ಕೂ ಅಧಿಕ ರೈತರು ಭಾಗವಹಿಸಿದ್ದರು.

Tags:

error: Content is protected !!