Uncategorized

ಗೋಕಾಕದ ಪಂಚನಟ್ಟಿ ಬಳಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು!

Share

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ಬಳಿ ಇರುವ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ದುರದೈವಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಪಂಚನಟ್ಟಿ ಗ್ರಾಮದ ಈರಪ್ಪ ಮಲ್ಲಪ್ಪ ನಂದಿಗೌಡರ (32) ಮತ್ತು ಮಲ್ಲಪ್ಪ ಮಹಾದೇವ ನಂದಿಗೌಡರ (27) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಗೋಕಾಕ ಗ್ರಾಮೀಣ ವೃತ್ತ ಪೊಲೀಸ್ ನಿರೀಕ್ಷಕರು (CPI) ಹಾಗೂ ಉಪನಿರೀಕ್ಷಕರು (PSI) ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಭೀಕರ ದುರಂತದ ಕುರಿತು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!