Accident

ಭೀಕರ ರಸ್ತೆ ಅಪಘಾತ; ಲಾರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಯುವಕರ ಸ್ಥಳದಲ್ಲೇ ಸಾವು

Share

ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ಇಬ್ಬರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಚಿಕ್ಕೋಡಿ ಪಟ್ಟಣದ ನಿವಾಸಿಗಳಾದ ಸಿದ್ದು ಕುರಳೆ ಹಾಗೂ ಸ್ವರೂಪ ಮಾಳುದೆ ಮೃತಪಟ್ಟ ದುರ್ದೈವಿ ಯುವಕರಾಗಿದ್ದಾರೆ.

ಮೃತರಾದ ಯುವಕರಿಬ್ಬರು ತಮ್ಮ ಕೆಲಸವನ್ನು ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ವಾಪಸ್ ಬರುತ್ತಿದ್ದರು. ಈ ವೇಳೆ ಚಿಕ್ಕೋಡಿ ಪಟ್ಟಣದ ಹೊರವಲಯದ ಚಿಂಚಣಿ ಟೋಲ್ ಪ್ಲಾಜಾ ಬಳಿ ಬರುತ್ತಿದ್ದಂತೆ, ಇವರ ಬೈಕ್ ಮುಂದೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಜೋರಾಗಿ ಡಿಕ್ಕಿ ಹೊಡೆದಿದೆ. ಮುಂದೆ ಹೋಗುತ್ತಿದ್ದ ಲಾರಿಯನ್ನು ಗಮನಿಸದೇ ಇರುವುದೇ ಈ ಘೋರ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಯುವಕರಿಬ್ಬರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಚಿಕ್ಕೋಡಿ ಸಂಚಾರಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಈ ಕುರಿತು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿ.ಕೆ.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!