Uncategorized

ಇದು ರಸ್ತೆಯೋ.. ಕಂಬಳದ ಗದ್ದೆಯೋ?: ಕೆಸರಿನಲ್ಲಿ ಸಿಲುಕಿ ಹಾಕಿಕೊಂಡ ಬಸ್….!!! ಆಕ್ರೋಶಗೊಂಡ ಸಾರ್ವಜನಿಕರು!

Share

ಬೆಳಗಾವಿ-ಗೋವಾ ಹೆದ್ದಾರಿಯ ರಾಮನಗರ ವರಕಡ ದಯನೀಯ ಸ್ಥಿತಿಗೆ ಸಾರ್ವಜನಿಕರು ಕಣ್ಣೀರು ಹಾಕುತ್ತಿದ್ದಾರೆ. ರಸ್ತೆಯೋ ಅಥವಾ ಕೆಸರುಗದ್ದೆಯೋ ಎಂದು ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಾಗುತ್ತಿದ್ದಾರೆ. ಕೆಸರಿ ಗದ್ದೆಯಂತಾದ ರಸ್ತೆಯಲ್ಲಿ ಬಸ್ ಸಿಲುಕಿಕೊಂಡು ಜನರು ಪರದಾಡಿದ ಘಟನೆ ನಡೆದಿದೆ.

ಬೆಳಗಾವಿ-ಗೋವಾ ಹೆದ್ದಾರಿಯ ರಾಮನಗರ ವರಕಡದ ಗೋವಾ ಹೆದ್ದಾರಿಯು ಸಂಪೂರ್ಣವಾಗಿ ಕೆಸರುಮಯವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಕಂಟಕವಾಗಿ ಪರಿಣಮಿಸಿದೆ. ಪ್ರತಿದಿನ ಸಂಚರಿಸುವ ನೂರಾರು ವಾಹನಗಳು ಈ ಕೆಸರಿನಲ್ಲಿ ಹೂತುಹೋಗುತ್ತಿದ್ದು, ಇತ್ತೀಚೆಗಷ್ಟೇ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಕೆಸರಿನಲ್ಲಿ ಸಿಲುಕಿ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು. ಸಾಮಾನ್ಯ ಜನರಿಗೆ ಈ ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂತಹ ನರಕಸದೃಶ ವಾತಾವರಣ ನಿರ್ಮಾಣವಾಗಿದೆ.

ಈ ರಸ್ತೆ ಅವ್ಯವಸ್ಥೆಯ ಕುರಿತು ಸ್ಥಳೀಯರು ಮತ್ತು ವಾಹನ ಸವಾರರು ಸಂಬಂಧಪಟ್ಟ ಶಾಸಕರ ಗಮನಕ್ಕೆ ತಂದಿದ್ದರೂ, ಇದುವರೆಗೆ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಈ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ‘ನಮ್ಮ ಗೋಳು ಕೇಳುವವರು ಯಾರೂ ಇಲ್ಲವೇ?’ ಎಂದು ಪ್ರಶ್ನಿಸುತ್ತಿದ್ದಾರೆ. ಕೂಡಲೇ ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಸಿದ್ದಾರೆ.

Tags:

error: Content is protected !!