Uncategorized

ಬಾಗಲಕೋಟೆಗೆ ಎಂ.ಬಿ.ಪಾಟೀಲ್ ಮೊದಲ ಭೇಟಿ: ಮುಂಗಾರು ಪೂರ್ವ ಸಿದ್ಧತೆ ಹಾಗೂ ಬರ ನಿರ್ವಹಣೆ ಕುರಿತು ಉನ್ನತ ಮಟ್ಟದ ಸಭೆ!

Share

ಬಾಗಲಕೋಟೆ ಜಿಲ್ಲೆಯ ನೂತನ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಎಂ.ಬಿ.ಪಾಟೀಲ್ ಅವರು ಇಂದು ಪ್ರಥಮ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಜಿಲ್ಲಾಡಳಿತ ಭವನದ ಜಿ.ಪಂ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಶಾಸಕರೊಂದಿಗೆ ಮಹತ್ವದ ಸಭೆ ನಡೆಸಿ, ಮುಂಗಾರು ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ನೂತನ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಅವರು ಬಾಗಲಕೋಟೆ ಜಿಲ್ಲೆಗೆ ತಮ್ಮ ಮೊದಲ ಭೇಟಿಯಲ್ಲೇ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಮುಖ ಸಭೆಯಲ್ಲಿ ಭಾಗವಹಿಸಿದ್ದಾರೆ. ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆಗಳು ಹಾಗೂ ಜಿಲ್ಲೆಯಲ್ಲಿ ಎದುರಾಗಬಹುದಾದ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.

ಪ್ರಕೃತಿ ವಿಕೋಪಗಳನ್ನು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿರಬೇಕು ಎಂದು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಉನ್ನತ ಮಟ್ಟದ ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ಸ್ಥಿತಿಗತಿ, ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸುವ ಕುರಿತು ಸಚಿವರು ಸವಿಸ್ತಾರವಾದ ಮಾಹಿತಿ ಪಡೆಯುತ್ತಿದ್ದಾರೆ. ಬರ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತಿದ್ದು, ಸಭೆಯಲ್ಲಿ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

Tags:

error: Content is protected !!