Dharwad

ನವಲಗುಂದ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಡಿಯುವ ನೀರಿನ ಸಮಸ್ಯೆ ಕುರಿತು ಶಾಸಕರಿಂದ ಸಭೆ….

Share

ಧಾರವಾಡ ಜಿಲ್ಲೆಯಲ್ಲಿ ನಿರೀಕ್ಷಿತ ಮಟ್ಟದ ಮುಂಗಾರು ಮಳೆ ಆಗದಿರುವ ಹಿನ್ನಲೆ ಹಾಗೂ ನವಲಗುಂದ ವಿಧಾನ ಸಭಾ ಜ್ಷೇತ್ರದಲ್ಲಿ ಜನ ಸೇರಿ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಂದು ನವಲಗುಂದ ಶಾಸಕರಾದ ಎನ್ ಹೆಚ್ ಕೊನರೆಡ್ಡಿಯವರು ಅಧಿಕಾರಿಗಳ ಸಭೆ ನಡೆಸಿ ಖಡಕ್ ಸೂಚನೆ ನೀಡಿದರು.

ಧಾರವಾಡ ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಸಭೆ ಜರುಗಿತ್ತು. ಸಭೆಯಲ್ಲಿ ನವಲಗುಂದ ಶಾಸಕ ಎನ್ ಹೆಚ್ ಕೊನರೆಡ್ಡಿ ಹಾಗೂ ಜಿಲ್ಲಾ ಪಂಚಾಯತಿ ಸಿಇಓ ಹಾಜರಿದ್ದು, ನವಲಗುಂದ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ನಿವಾಸಕ್ಕೆ ಶುದ್ಧ ಕುಡಿಯುವ ನೀರಿನ ಪೂರೈಕೆ ಕುರಿತು ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಶಾಸಕರು ಸಭೆ ಮಾಡಿದರು. ಈಗಾಗಲೇ ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಡಿದ್ದು, ಕುಡಿಯುವ ನೀರಿನ ಸಮಸ್ಯೆ ತಲೆದೂರುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ಹೆಜ್ಜೆ ಇಟ್ಟಿರುವ ಶಾಸಕರು ಕುಡಿಯುವ ನೀರಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.‌

ಜತೆಗೆ ಕ್ಷೇತ್ರದ ಪ್ರತಿಯೊಂದು ಮನೆಗೂ ನಿರಂತರ, ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ತಲುಪಿಸುವುದು ನಮ್ಮ ಮುಖ್ಯ ಆದ್ಯತೆಯಾಗಿದ್ದು, ಯಾವುದೇ ಗ್ರಾಮ ಅಥವಾ ನಗರ ಪ್ರದೇಶದಲ್ಲಿ ನೀರಿನ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸದಂತೆ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜನರ ಮೂಲಭೂತ ಅಗತ್ಯಗಳನ್ನು ಸಮಯೋಚಿತವಾಗಿ ಪೂರೈಸುವ ಮೂಲಕ ಅಭಿವೃದ್ಧಿ ಮತ್ತು ಜನಸೇವೆಗೆ ಬದ್ಧವಾದ ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಕೆಲಸಕ್ಕೆ ಎಲ್ಲರೂ ಆತ್ಮಸಾಕ್ಷಿಯಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು. ಇನ್ನೂ ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ್, ಆರ್.ಡಬ್ಲ್ಯೂ.ಎಸ್ ಎಇ ಶ್ರೀ ಜಗದೀಶ್ ಪಾಟೀಲ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!