Khanapur

ಖಾನಾಪುರ: ಜಾಂಬೋಟಿಯಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ವಿಠ್ಠಲ ಹಲಗೇಕರ

Share

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಗ್ರಾಮದಲ್ಲಿ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸ್ಥಳೀಯ ಶಾಸಕರಾದ ವಿಠ್ಠಲ ಹಲಗೇಕರ ಅವರು ದೀಪ ಬೆಳಗಿಸುವ ಮೂಲಕ ಈ ಬೃಹತ್ ಲಸಿಕಾ ಅಭಿಯಾನವನ್ನು ಉದ್ಘಾಟಿಸಿದರು.

ಖಾನಾಪುರ ತಾಲೂಕಿನ ಜಾಂಬೋಟಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶಾಸಕ ವಿಠ್ಠಲ ಹಲಗೇಕರ ಅವರು ಉದ್ಘಾಟಿಸಿ, ಲಸಿಕೆ ಹಾಕಿಸುವ ಮೂಲಕ ಪೋಷಕರು ತಮ್ಮ ಮಕ್ಕಳ ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಕಿವಡಸನ್ನವರ ಅವರು ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಲಸಿಕಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಲ್ಸ್ ಪೋಲಿಯೋ ನೋಡಲ್ ಅಧಿಕಾರಿ ಡಾ. ಶಕೀಲಾ ಸೇರಿದಂತೆ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಅಭಿಯಾನದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ತಾಯಿಂದಿರು ತಮ್ಮ ಪುಟಾಣಿ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಲು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಈ ಬೃಹತ್ ಆಂದೋಲನವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ, ಬಹುಸಂಖ್ಯೆಯ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿಯಲ್ಲಿ ನಿಂತು ಶ್ರಮಿಸಿದರು.

Tags:

error: Content is protected !!