Hukkeri

ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿಯಾಗಿ ಎಂ.ಎಲ್.ಸಿ. ಪ್ರಕಾಶ್ ಹುಕ್ಕೇರಿ 2 ನೇ ಬಾರಿ ನೇಮಕ

Share

ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಅವರನ್ನು ಕರ್ನಾಟಕ ಸರ್ಕಾರದ ನವದೆಹಲಿ ಅಧಿಕೃತ ವಿಶೇಷ ಪ್ರತಿನಿಧಿಯಾಗಿ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮಹತ್ವದ ಜವಾಬ್ದಾರಿಯನ್ನು ಪ್ರಕಾಶ್ ಹುಕ್ಕೇರಿ ಅವರು ಎರಡನೇ ಬಾರಿಗೆ ಅಲಂಕರಿಸುತ್ತಿರುವುದು ಅವರ ದೀರ್ಘಕಾಲದ ರಾಜಕೀಯ ಅನುಭವ ಮತ್ತು ಆಡಳಿತಾತ್ಮಕ ದಕ್ಷತೆಗೆ ಹಿಡಿದ ಕೈಗನ್ನಡಿಯಾಗಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಸಮನ್ವಯ ಸಾಧಿಸುವಲ್ಲಿ ಪ್ರಕಾಶ್ ಹುಕ್ಕೇರಿ ಅವರ ಪಾತ್ರ ಪ್ರಮುಖವಾಗಲಿದೆ. ನವದೆಹಲಿಯಲ್ಲಿ ರಾಜ್ಯದ ಹಿತಾಸಕ್ತಿಗಳನ್ನು ಕಾಯುವುದು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಮತ್ತು ಅನುದಾನಗಳು ರಾಜ್ಯಕ್ಕೆ ಶೀಘ್ರವಾಗಿ ತಲುಪುವಂತೆ ನೋಡಿಕೊಳ್ಳುವಲ್ಲಿ ಅವರು ಪ್ರಮುಖ ಕೊಂಡಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

Tags:

error: Content is protected !!