Vijaypura

ವಿಜಯುರದಲ್ಲಿ ಮುಂಗಾರು ಮಳೆ ಆರ್ಭಟ; ಜನಜೀವನ ಅಸ್ತವ್ಯಸ್ತ

Share

ವಿಜಯಪುರ ನಗರದಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಮೂರು ಗಂಟೆಗಳ ಧಾರಾಕಾರ ಮುಂಗಾರು ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದ ಹಲವೆಡೆ ಸುರಿದ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಕೆಲ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಮುಂಗಾರು ಮಳೆಯ ಆರ್ಭಟದಿಂದ ನಗರದ ದೈನಂದಿನ ಚಟುವಟಿಕೆಗಳ ಮೇಲೂ ಪರಿಣಾಮ ಬೀರಿತು.

Tags:

error: Content is protected !!