ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದಲ್ಲಿ ಮೊಹರಂ ಹಬ್ಬವನ್ನು ಭಕ್ತಿಭಾವ ಹಾಗೂ ಶಾಂತಿಯುತವಾಗಿ ಆಚರಿಸಲಾಯಿತು.


ವಿವಿಧ ಮೊಹಲ್ಲಾಗಳಿಂದ ಅಲಂಕೃತ ಪಂಜಾಗಳು ಮತ್ತು ಧಾರ್ಮಿಕ ಮೆರವಣಿಗೆಗಳು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದವು. ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಧಾರ್ಮಿಕ ಆಚರಣೆಗಳನ್ನು ನೆರವೇರಿಸಿದರು. ಸಾರ್ವಜನಿಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಪೊಲೀಸ್ ಇಲಾಖೆ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದೆ ಮೊಹರಂ ಹಬ್ಬವೂ ಯಶಸ್ವಿಯಾಗಿ ನೆರವೇರಿತು. ಬಸವನ ಬಾಗೇವಾಡಿ ಪಟ್ಟಣದ ಜನರು ಧರ್ಮಸೌಹಾರ್ದತೆಯ ಸಂದೇಶ ಸಾರುತ್ತಾ ಮೊಹರಂ ಆಚರಣೆಯಲ್ಲಿ ಭಾಗವಹಿಸಿದರು.
