State

ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನದ ಅವಶ್ಯಕತೆಯಿದೆ; ಸಚಿವ ಸತೀಶ್ ಜಾರಕಿಹೊಳಿ

Share

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಸಮುದಾಯದ ಅಭಿವೃದ್ಧಿ ಹಾಗೂ ಹಕ್ಕೊತ್ತಾಯಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಎಸ್ಟಿ ಸಮುದಾಯಕ್ಕೆ ಎದುರಾಗಿರುವ ಮೀಸಲಾತಿ ಸಮಸ್ಯೆಗಳ ಪರಿಹಾರ ಹಾಗೂ ಸರ್ಕಾರದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಂತೆ ಅವರು ಮುಖ್ಯಮಂತ್ರಿಗಳ ಗಮನ ಸೆಳೆಯಲು ಮುಂದಾಗಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ನಮ್ಮ ಸಮುದಾಯಕ್ಕೆ ಸಂಬಂಧಿಸಿದಂತೆ ಪ್ರಮುಖವಾಗಿ ಎರಡು-ಮೂರು ಸಮಸ್ಯೆಗಳಿದ್ದು, ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿರುವ ವ್ಯಾಜ್ಯದ ವಿರುದ್ಧ ನಮ್ಮ ಪರವಾಗಿ ಸಮರ್ಥ ವಾದ ಮಂಡಿಸಬೇಕಿದೆ ಅಥವಾ ತಡೆಯಾಜ್ಞೆಯನ್ನು ತೆರವುಗೊಳಿಸಬೇಕಿದೆ ಎಂದು ಸಚಿವರು ತಿಳಿಸಿದರು. ಇದಕ್ಕಾಗಿ ಹಿರಿಯ ನ್ಯಾಯವಾದಿಗಳನ್ನು ನೇಮಿಸುವ ಕುರಿತು ಚರ್ಚೆ ನಡೆಸಬೇಕಿದೆ ಎಂದ ಅವರು, ಮೊದಲಿನಂತೆ ನಮ್ಮ ಸಮುದಾಯಕ್ಕೆ ಮತ್ತೆರಡು ಸಚಿವ ಸ್ಥಾನಗಳನ್ನು ನೀಡಬೇಕು ಹಾಗೂ ಸದ್ಯ ಎಸ್‌ಟಿ ಸಮುದಾಯದಿಂದ ಯಾರೂ ವಿಶ್ವವಿದ್ಯಾಲಯಗಳಲ್ಲಿ ವೈಸ್ ಚಾನ್ಸಲರ್ಸ್ (ಕುಲಪತಿ) ಆಗಿಲ್ಲದಿರುವ ಲೋಪವನ್ನು ಸರಿಪಡಿಸಬೇಕು ಸೇರಿದಂತೆ ವಿವಿಧ ಸಮುದಾಯಗಳ ಬೇಡಿಕೆಗಳ ಕುರಿತು ಚರ್ಚೆ ನಡೆಸಲಾಗುವುದು ಎಂದರು.

ಇದೇ ವೇಳೆ ಎಂಎಲ್‌ಸಿ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ಸದಸ್ಯರನ್ನು ಕೇವಲ ಮತದಾನದ ತರಬೇತಿಗಾಗಿ ಕರೆದುಕೊಂಡು ಹೋಗಲಾಗುತ್ತಿದೆಯೇ ಹೊರತು ಬೇರೆ ಯಾವುದೇ ಕಾರಣಕ್ಕಲ್ಲ, ನಮ್ಮಲ್ಲಿ ಮತದಾನದ ಕೊರತೆಯಿಲ್ಲ ಮತ್ತು ಚುನಾವಣೆಗೆ ಇನ್ನೂ ಎರಡು ದಿನ ಬಾಕಿಯಿದೆ ಎಂದು ಸ್ಪಷ್ಟಪಡಿಸಿದರು. ಇಂದು ಬೆಳಗಾವಿಯಲ್ಲಿ ಜಿಲ್ಲಾಧಿಕಾರಿಗಳ ಮಹತ್ವದ ಸಭೆಯನ್ನು ಕರೆಯಲಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದರು.

Tags:

error: Content is protected !!