ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮತ ಕ್ಷೇತ್ರದ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನವನ್ನು ನೀಡಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಬೆಂಗಳೂರಿಗೆ ತೆರಳಿದ್ದ ನಿಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿ ಕೆ ಶಿವಕುಮಾರ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಇವರಿಗೆ ಮನವಿ ಸಲ್ಲಿಸಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಮುಖಂಡರುಗಳ ಮನೆಗಳಿಗೆ ತೆರಳಿದ ನಿಯೋಗ, ನಾಡಗೌಡರು ಕಳೆದ 40 ವರ್ಷಗಳಿಂದ ರಾಜಕಾರಣದಲ್ಲಿದ್ದು, ಆರು ಬಾರಿ ಶಾಸಕರಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಂತ ಹಿರಿಯ ಶಾಸಕರಾಗಿದ್ದಾರೆ. ಅವರಿಗೆ ಸಚಿವ ಸಂಪುಟದಲ್ಲಿ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಡಲೇಬೇಕೆಂದು ಆಯೋಗದ ಪರವಾಗಿ ವೈ.ಎಚ್. ವಿಜಯಕರ ಮನವಿ ಮಾಡಿದರು.
ನಿಯೋಗದಿಂದ ಮನವಿ ಸ್ವೀಕರಿಸಿದ ಮುಖಂಡರು ಹೈ ಕಮಾಂಡ್ ಸಭೆಯಲ್ಲಿ ಚರ್ಚಿಸಿ ನಿಮ್ಮೆಲ್ಲರ ಆಸೆ ಈಡೇರಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿ, ಸಕಾರಾತ್ಮಕವಾಗಿ ಸ್ಪಂದಿಸಿದರು. ಬ್ಲಾಕ್ ಕಾಂಗ್ರೆಸ್‌ಅಧ್ಯಕ್ಷ ಗುರು ತಾರನಾಳ, ಬಿ.ಕೆ. ಬಿರಾದಾರ, ಪ್ರಭುರಾಜ ಕಲ್ಬುರ್ಗಿ, ಪ್ರಭುಗೌಡ ಮದರಕಲ್ಲ, ಶರಣುಧನಿ ದೇಶಮುಖ, ಮುತ್ತುಕಡಿ, ಸೇರಿ ನೂರಾರು ಜನರು ಇದ್ದರು.
