hubbali

ಶಾಸಕ ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Share

ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಸತತ ಮೂರು ಬಾರಿ ಶಾಸಕರಾಗಿ ಪೂರ್ವ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕ್ಷೇತ್ರದಲ್ಲಿ ಬಡವರಿಗೆ ವಸತಿ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.
ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದರೇ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಅಬ್ಬಯ್ಯ ಅವರು ಮಾಡಲಿದ್ದಾರೆ.‌ಈ ನಿಟ್ಟಿನಲ್ಲಿ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹುಬ್ಬಳ್ಳಿ ತಾಲೂಕು ರೈತ ಸಂಘದ ಅಧ್ಯಕ್ಷರಾದ ಸಿದ್ದಪ್ಪ ಮೀಸೆ, ಉಪಾಧ್ಯಕ್ಷ ಫಕ್ಕೀರಗೌಡ ಪಾಟೀಲ್, ರೈತ ಮುಖಂಡರಾದ ಅಡಿವೆಪ್ಪ ನಂದಿಹಳ್ಳಿ, ಗುರಸಿದ್ದಪ್ಪ ಕಟಗಿ, ಚನ್ನಬಸಪ್ಪ ಅಸುಂಡಿ, ಮೋಹನ್ ಅಸುಂಡಿ,‌ ವೀರಭದ್ರಪ್ಪ ಮೇಟಿ ಗಂಗಾಧರ ಅಸುಂಡಿ ಸೇರಿದಂತೆ ಇತರರು ಇದ್ದರು.

Tags:

error: Content is protected !!