ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಸಚಿವ ಸ್ಥಾನಗಳಿಗೆ ಆಕ್ರೋಶಗಳು ಭುಗಿಲೆದ್ದಿವೆ. ಹುಬ್ಬಳ್ಳಿ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಲಾಗಿದೆ.

ಶಾಸಕ ಪ್ರಸಾದ ಅಬ್ಬಯ್ಯ ಅವರು ಸತತ ಮೂರು ಬಾರಿ ಶಾಸಕ ಆಯ್ಕೆ ಆಗಿದ್ದು ಅವರಿಗೆ ಮಂತ್ರಿ ಮಾಡಬೇಕೆಂದು, ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹೋರಾಟ ಮಾಡುತ್ತಿದ್ದಾರೆ. ಅಷ್ಟೇ ಅಲ್ಲೆ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡದಿದ್ರೆ ಹುಬ್ಬಳ್ಳಿ ಧಾರವಾಡ ಬಂದ್ ಮಾಡುತ್ತೇವೆಂದು ಇಂದು ನಗರದ ದುರ್ಗದ ಬೈಲ್ ನಲ್ಲಿ ಟೈಯರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದರು.

