hubbali

ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ

Share

ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿಂದು ಬೆಂಬಲಿಗರು ಹಾಗೂ ಅಭಿಮಾನಿಗಳು ಮೆರವಣಿಗೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಲ್ಪ ಸಂಖ್ಯಾತರ ಕೋಟಾದಲ್ಲಿ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು. ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಜನರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡದರೇ ಅವರಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯ ಸಾಧ್ಯವಿದೆ ಹಾಗಾಗಿ ಅವರಿಗೆ ಸಚಿವ ಸ್ಥಾನ ನೀಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಹೋರಾಟಕ್ಕೆ ಅಣಿಯಾಗುತ್ತೇವೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಸ್.ಡಿ. ಮಕಾಂದರ್, ಶಹಜಮಾನ್ ಮುಜಾಹೀದ್, ಇನಾಯಿತ್ ಖಾನ್ ಪಠಾಣ್, ಪರ್ವೇಜ್ ಬ್ಯಾಹಟ್ಟಿ, ಸೇರಿದಂತೆ ನೂರಾರು ಪ್ರತಿಭಟನಾಕಾರರು ಇದ್ದರು‌.

Tags:

error: Content is protected !!