Chikkodi

ಚಿಕ್ಕೋಡಿಯಲ್ಲಿನ ರಸ್ತೆಗೆ ಕಂಗೆಟ್ಟ ಸಾರ್ವಜನಿಕರು,ಅಂಕಲಿ ಕೂಟದಿಂದ ಬಿ.ಕೆ ಕಾಲೇಜಿನ‌ವರೆಗೆ ರಸ್ತೆ ತುಂಬಾ ಬೃಹತ್ ಗುಂಡಿಗಳು

Share

ಪಟ್ಟಣದ ಅಂಕಲಿ ಕೂಟದಿಂದ ಬಿ.ಕೆ ಕಾಲೇಜಿನ‌ವರೆಗಿನ ರಸ್ತೆ ಸಂಚಾರ ಹರಸಾಹಸವಾಗಿ ಪರಿಣಮಿಸಿದೆ. ಇದು ಸಾಮಾನ್ಯ ರಸ್ತೆಯಲ್ಲ, ಸ್ವತಃ ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಗೆ ಬರುವ ರಸ್ತೆ,ಆದರೆ ಈ ರಸ್ತೆಯ ತುಂಬಾ ಬಿದ್ದಿರುವ ಬೃಹತ್ ಗುಂಡಿಗಳು ವಾಹನ ಸವಾರರ ಜೀವಕ್ಕೆ ಕುತ್ತು ತರುತ್ತಿವೆ. ಇಷ್ಟೆಲ್ಲಾ ಆಗ್ತಿದ್ರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದಾರೆ. ಸಾರ್ವಜನಿಕರು,ಪತ್ರಕರ್ತರು ಫೋನ್ ಮಾಡಿದರೆ ಅಧಿಕಾರಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..

ಚಿಕ್ಕೋಡಿ ಪಟ್ಟಣದ ಪ್ರಮುಖ ರಸ್ತೆಯಾಗಿರುವ ಅಂಕಲಿ ಕೂಟದಿಂದ ಬಿ.ಕೆ ಕಾಲೇಜಿನ‌ವರೆಗಿನ ಮಾರ್ಗವೀಗ ಸಾರ್ವಜನಿಕರ ಪಾಲಿಗೆ ನರಕಸದೃಶವಾಗಿದೆ. ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಗೆ ಬರುವ ಈ ರಸ್ತೆಯುದ್ದಕ್ಕೂ ಬಿದ್ದಿರುವ ಗುಂಡಿಗಳಿಂದಾಗಿ ವಾಹನ ಸವಾರರು ಪ್ರತಿದಿನ ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹಿಡಿಶಾಪ ಹಾಕುತ್ತಿದ್ದಾರೆ.

ಇನ್ನು ಈ ರಸ್ತೆ ಅವ್ಯವಸ್ಥೆಯ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಆದರೆ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕಾದ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಅಧಿಕಾರಿಗಳು ಮಾತ್ರ ಕಣ್ಮರೆಯಾಗಿದ್ದಾರೆ. ರಸ್ತೆ ದುರಸ್ತಿ ಮಾಡುವಂತೆ ಸಾರ್ವಜನಿಕರು ಅಧಿಕಾರಿಗಳಿಗೆ ಫೋನ್ ಕರೆ ಮಾಡಲು ಪ್ರಯತ್ನಿಸಿದರೆ, ಯಾವುದೇ ಅಧಿಕಾರಿಗಳು ಫೋನ್ ಸಂಪರ್ಕಕ್ಕೆ ಸಿಗುತ್ತಿಲ್ಲ. ಅಧಿಕಾರಿಗಳ ಈ ಬೇಜವಾಬ್ದಾರಿತನ ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.

ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಅಂಕಲಿ ಕೂಟದಿಂದ ಬಿ.ಕೆ ಕಾಲೇಜಿನ‌ವರೆಗಿನ ರಸ್ತೆ ಗುಂಡಿಗಳನ್ನು ಮುಚ್ಚಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ.

ಡಿ.ಕೆ‌.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!