State

ರಾಮಲಿಂಗಾರೆಡ್ಡಿ ರಾಜೀನಾಮೆ ಅಸ್ತ್ರ; ಉಸ್ತುವಾರಿಯನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್, ಅಸಮಾದಾನ ಶಮನಕ್ಕೆ ಕಸರತ್ತು!

Share

ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಘೋಷಣೆ ಬೆನ್ನಲ್ಲೇ ಅಲರ್ಟ್ ಆಗಿರುವ ಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ಈ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ರಾಮಲಿಂಗಾರೆಡ್ಡಿ ಅವರ ಮನವೊಲಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಕ್ಷಣವೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ರಾಮಲಿಂಗಾರೆಡ್ಡಿ ಅವರು ಗ್ರಾಮೀಣ ಪ್ರದೇಶದವರಲ್ಲ, ಅವರಿಗೆ ನಗರ ಪ್ರದೇಶದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಇಚ್ಛೆಯಿದೆ. ಸದ್ಯ ಅವರಿಗೆ ಜಲಸಂಪನ್ಮೂಲ ಇಲಾಖೆಯನ್ನು ನೀಡಲಾಗಿದೆ. ಅವರು ನನ್ನ ಅತ್ಯಂತ ಉತ್ತಮ ಸ್ನೇಹಿತ ಹಾಗೂ ಪಕ್ಷದ ಹಿರಿಯ ಮತ್ತು ಪ್ರಮುಖ ನಾಯಕರಾಗಿದ್ದಾರೆ. ಶೀಘ್ರದಲ್ಲೇ ನಾನು ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಎಲ್ಲಾ ಗೊಂದಲ ಹಾಗೂ ಸಮಸ್ಯೆಗಳನ್ನು ಬಗೆಹರಿಸುತ್ತೇನೆ,” ಎಂದು ಹೇಳುವ ಮೂಲಕ ಅಸಮಾಧಾನದ ಜ್ವಾಲೆಯನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ.

Tags:

error: Content is protected !!