Dharwad

ಧಾರವಾಡ ಹೈಕೋರ್ಟ್ ಪೀಠಕ್ಕೆ ಎರಡನೇ ಬಾರಿ ಬಾಂಬ್ ಬೆದರಿಕೆ….

Share

ಧಾರವಾಡದ ಮುಮ್ಮಿಗಟ್ಟಿ ಬಳಿ ಇರುವ ಹೈಕೋರ್ಟ್‌ ಪೀಠಕ್ಕೆ ಪದೇ ಪದೇ ಬಾಂಬ್ ಬೆದರಿಕೆ ಸಂದೇಶ ಬರುತ್ತಿರುವ ಹಿನ್ನೆಲೆ ಹೈಕೋರ್ಟ್‌ಗೆ ಬಿಗಿ ಪೊಲೀಸ್ ಭದ್ರತೆ ಒದಗಿಸಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ.

ಧಾರವಾಡ ಹೈಕೋರ್ಟ್ ಪೀಠಕ್ಕೆ ಎರಡು ಬಾರಿ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿತ್ತು. ಈ ಹಿನ್ನೆಲೆ ಹೈಕೋರ್ಟ್‌ ವಕೀಲರ ಸಂಘವು ಗೃಹ ಇಲಾಖೆಗೆ ಪತ್ರ ಬರೆದು ಹೆಚ್ಚಿನ ಭದ್ರತೆ ನೀಡುವಂತೆ ಮನವಿ ಮಾಡಿತ್ತು. ಈ ಹಿನ್ನೆಲೆ ಹೈಕೋರ್ಟ್‌ಗೆ ಸುಮಾರು 40 ಜನ ಭದ್ರತಾ ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನೇಮಕ ಮಾಡಲಾಗಿದೆ. ಹೈಕೋರ್ಟ್‌ಗೆ ಬರುವ ವಕೀಲರ ಕಾರು, ಸಿಬ್ಬಂದಿ ಹಾಗೂ ಕಕ್ಷಿದಾರರನ್ನೂ ಸಹ ಭದ್ರತಾ ಸಿಬ್ಬಂದಿ ತೀವ್ರ ತಪಾಸಣೆ ನಡೆಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗೆ ಹೈಕೋರ್ಟ್‌ಗೆ ಎರಡು ಬಾರಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ಹೆಚ್ಚಳ ಮಾಡುವುದರ ಜೊತೆಗೆ ಶ್ವಾನ ದಳ, ಸರ್ಚ್ ಟೀಮ್, ವೆಹಿಕಲ್ ಚೆಕ್ಕಿಂಗ್, ಬಾಂಬ್ ನಿಷ್ಕ್ರಿಯ ದಳವನ್ನೂ ಭದ್ರತೆಗಾಗಿ ನಿಯೋಜಿಸಲಾಗಿದೆ.

Tags:

error: Content is protected !!