Vijaypura

ವಿದ್ಯಾರ್ಥಿಗಳ ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡಿದ ಪ್ರತಿಭಾ ಪುರಸ್ಕಾರ

Share

ಪಂಚಮಸಾಲಿ ಸಮಾಜದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಭಾನುವಾರ ವಿಜಯಪುರ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಮನಗೂಳಿ ಮಠದ ಸಂಗನಬಸವ ಶ್ರೀಗಳು ಉದ್ಘಾಟಿಸಿ ಮಾತನಾಡಿ, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳ ಸಾಧನೆಗೆ ಸಮಾಜದ ಬೆಂಬಲ ಮತ್ತು ಪ್ರೋತ್ಸಾಹ ಅಗತ್ಯವಾಗಿದ್ದು, ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಯಲ್ಲಿ ಶಿಕ್ಷಣದ ಬಗ್ಗೆ ಮತ್ತಷ್ಟು ಆಸಕ್ತಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿನಿ ಆರತಿ ಮಾತನಾಡಿ, ಸಮಾಜವು ನಮ್ಮ ಸಾಧನೆಯನ್ನು ಗುರುತಿಸಿ ಗೌರವಿಸಿರುವುದು ಸಂತಸ ತಂದಿದೆ. ಈ ಸನ್ಮಾನವು ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡಿದೆ ಎಂದು ತಿಳಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಮಾಜದ ಈ ಕಾರ್ಯ ಶ್ಲಾಘನೀಯವಾಗಿದ್ದು, ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಈ ಗೌರವಕ್ಕೆ ಪಾತ್ರರಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಡಾ. ಸುರೇಶ ಬಿರಾದಾರ, ಹೊನ್ನಮಲ್ಲ ಸಾರವಾಡ ಸೇರಿದಂತೆ ಸಮಾಜದ ಮುಖಂಡರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:

error: Content is protected !!