ಸ್ಥಳೀಯ ಪ್ರತಿಷ್ಠಿತ ಸಿ.ಟಿ.ಇ. ಸಂಸ್ಥೆಯ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗಾಗಿ ಹಮ್ಮಿಕೊಳ್ಳಲಾಗಿದ್ದ “Innovative Teaching Tools and Techniques” (ನವೀನ ಬೋಧನಾ ಪರಿಕರಗಳು ಮತ್ತು ತಂತ್ರಗಳು) ವಿಷಯದ ಕುರಿತ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮವು (Capacity Building Programme) ಅತ್ಯಂತ ಯಶಸ್ವಿಯಾಗಿ ಜರುಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿ ಬಿ ಎಸ್ ಇ (CBSE) ಶಾಲೆಗಳ ಜಿಲ್ಲಾ ಸಂಯೋಜಕರು (District Co-ordinator) ಆದ ಡಾ. ಮಿಥುನ್ ಎಸ್. ದೇಶಪಾಂಡೆ ಅವರು ವಹಿಸಿದ್ದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ದೆವ್ಯಾನಿ ದೇಸಾಯಿ ಅವರು ಮಾತನಾಡಿ, “ಬದಲಾಗುತ್ತಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಆಧುನಿಕ ಬೋಧನಾ ವಿಧಾನಗಳು ಹಾಗೂ ನವೀನ ತಂತ್ರಜ್ಞಾನ ಆಧಾರಿತ ಬೋಧನಾ ಸಾಧನಗಳ ಬಳಕೆ ಅನಿವಾರ್ಯವಾಗಿದೆ. ವಿದ್ಯಾರ್ಥಿ ಕೇಂದ್ರಿತ ಕಲಿಕೆಗೆ ಶಿಕ್ಷಕರು ಹೆಚ್ಚಿನ ಮಹತ್ವ ನೀಡಬೇಕು” ಎಂದು ವಿಸ್ತಾರವಾಗಿ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಶಿಕ್ಷಕರು ತಮ್ಮ ಬೋಧನಾ ಕೌಶಲ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಿಕೊಳ್ಳಲು ಅನೇಕ ಉಪಯುಕ್ತ ಸಲಹೆಗಳು ಮತ್ತು ಪ್ರಾಯೋಗಿಕ ಚಟುವಟಿಕೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಶಾಲೆಗಳ ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಪಿ. ಜೋಶಿ ಹಾಗೂ ಶ್ರೀ ಮಹಾಂತೇಶ ಮಲಾಬಾದೆ ಉಪಸ್ಥಿತರಿದ್ದರು. ಶಾಲೆಯ ಎಲ್ಲಾ ಶಿಕ್ಷಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಒಟ್ಟಾರೆಯಾಗಿ ಈ ಕಾರ್ಯಕ್ರಮವು ಶಿಕ್ಷಕರ ವೃತ್ತಿಪರ ಬೆಳವಣಿಗೆಗೆ ಹೊಸ ಪ್ರೇರಣೆ ನೀಡುವುದರ ಜೊತೆಗೆ, ತರಗತಿಗಳಲ್ಲಿ ನವೀನ ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಲು ಅತ್ಯಂತ ಸಹಕಾರಿಯಾಯಿತು.
