Uncategorized

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ,ತಪ್ಪಿದ ದೊಡ್ಡ ದುರಂತ

Share

ಚಾಲಕನ ನಿಯಂತ್ರಣ ತಪ್ಪಿ ಬೂದಿ ತುಂಬಿದ ಲಾರಿಯೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಪಕ್ಕದ ಹೊಲದಲ್ಲಿ ಪಲ್ಟಿಯಾದ ಘಟನೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ-ಚಿಕ್ಕೋಡಿ ರಸ್ತೆಯ ಮಧ್ಯೆ ಸಂಭವಿಸಿದೆ. ಲಾರಿ ಪಲ್ಟಿಯಾದರೂ ಸಹ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬೂದಿ ತುಂಬಿಕೊಂಡು ವೇಗವಾಗಿ ಚಲಿಸುತ್ತಿದ್ದ ಲಾರಿಯು ಹಿರೇಕೋಡಿ-ಚಿಕ್ಕೋಡಿ ರಸ್ತೆ ಮಧ್ಯೆ ತಲುಪುತ್ತಿದ್ದಂತೆ ಹಠಾತ್ತನೆ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ಕಳೆದುಕೊಂಡ ಲಾರಿಯು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಜಖಂಗೊಂಡಿದ್ದು, ಲಾರಿಯು ಪಕ್ಕದ ಹೊಲಕ್ಕೆ ಉರುಳಿ ಬಿದ್ದಿದೆ.

ಅಪಘಾತದ ತೀವ್ರತೆಗೆ ಲಾರಿ ಪಲ್ಟಿಯಾಗಿದ್ದರೂ, ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಸಮಯದಲ್ಲಿ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಸಾರ್ವಜನಿಕರು ಹಾಗೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

Tags:

error: Content is protected !!