ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ್.ಕೆ. ತಿಳಿಸಿದ್ದಾರೆ. ಜಿಲ್ಲೆಯ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಅವರು ಹೇಳಿದರು. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಅಳಿಸುವಿಕೆ ಕಾರ್ಯಗಳನ್ನು ನಿಯಮಾನುಸಾರ ಕೈಗೊಳ್ಳಲಾಗು ವುದು ಎಂದರು. ಮತದಾರರ ಪಟ್ಟಿಯ ಪರಿಷ್ಕರಣೆ ವೇಳೆ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. ಯಾವುದೇ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗದಂತೆ ಜಿಲ್ಲಾಡಳಿತ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

