Accident

ಸರ್ಕಾರಿ ಬಸ್ ಮತ್ತು ಟಿಪ್ಪರ್ ವಾಹನದ ನಡುವೆ ಭೀಕರ ರಸ್ತೆ ಅಪಘಾತ; ಮೂವರ ಸಾವು

Share

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಸರ್ಕಾರಿ ಬಸ್ ಮತ್ತು ಟಿಪ್ಪರ್ ವಾಹನದ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದು, ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಟಿಪ್ಪರ್ ವಾಹನದ ಟೈರ್ ಬ್ಲಾಸ್ಟ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಟಿಪ್ಪರ್ ಚಾಲಕ ಅಶೋಕ ಉಟಗಿ, ಅವರ ಪತ್ನಿ ರಾಧಾಬಾಯಿ ಉಟಗಿ ಹಾಗೂ ಸರ್ಕಾರಿ ಬಸ್ ಚಾಲಕ ಹನುಮಂತ ಛವಲಾದಿ ಮೃತಪಟ್ಟಿದ್ದಾರೆ.
KA-28 AA-6792 ನೋಂದಣಿಯ ಟಿಪ್ಪರ್ ವಾಹನ ಚಡಚಣದತ್ತ ತೆರಳುತ್ತಿತ್ತು. ಇದೇ ವೇಳೆ KA-28 F-2468 ಸಂಖ್ಯೆಯ ಸರ್ಕಾರಿ ಬಸ್ ಚಡಚಣದಿಂದ ವಿಜಯಪುರದತ್ತ ಬರುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನೆಯಲ್ಲಿ ಸುಮಾರು ಹತ್ತು ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪಿಎಸ್ಐ ಸೊಮೇಶ ಗೆಜ್ಜಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:

error: Content is protected !!