ಗೂಡ್ಸ್ ಕಂಟೈನರ್ ಹಾಗೂ ಟಿಪ್ಪರ್ ಮಧ್ಯೆ ಡಿಕ್ಕಿಯಾಗಿ ಧಾರವಾಡದ ರಾಷ್ಟ್ರೀಯ ಹೆದ್ದಾರಿ ಮುಮ್ಮಿಗಟ್ಟಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಿಂದ ಧಾರವಾಡ ರಾಷ್ಟ್ರೀಯ ಹೆದ್ದಾರಿಯ ಕೆಲಕಾಲ ಮುಮ್ಮಿಗಟ್ಟಿ ಬಳಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇನ್ನೂ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಹಿನ್ನಲೆಯಲ್ಲಿ, ಸ್ಥಳಕ್ಕೆ ಗರಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತದ ಲಾರಿಗಳ ತೆರವುಗೊಳ್ಳಿ ಸಂಚಾರ ಸುಗಮಗೊಳ್ಳಿಸಿರುವ ಪೊಲೀಸರು, ಮೃತ ದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಘಟನೆ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಎರಡು ಗೂಡ್ಸ್ ವಾಹನಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಚಾಲಕ ಸಾವನ್ನಪ್ಪಿದ್ದು, ಇನ್ನೋರ್ವ ವಾಹನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಾವನ್ನಪ್ಪಿದವರ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
