Vijaypura

ವಿಜಯಪುರ ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಚಾಲನೆ

Share

ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆ ವಿಜಯಪುರದಲ್ಲಿ ನಡೆಯಿತು. ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ಇತರ ಗಣ್ಯರು ಸ್ಪರ್ಧೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಮಹಿಳಾ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ದೇಶಾದ್ಯಂತ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು. ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳ ಮಹಿಳಾ ಸೈಕ್ಲಿಸ್ಟ್‌ಗಳು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದರು. ಇಂಡಿಯನ್ ಮೇಡ್ ಸೈಕ್ಲಿಂಗ್ ವಿಭಾಗದಲ್ಲಿ ಅಪೇಕ್ಷಾ ಜಗತಾಪ್ ಪ್ರಥಮ ಸ್ಥಾನ ಪಡೆದರೆ, ವುಮೆನ್ಸ್ ಎಲೈಟ್ ವಿಭಾಗದಲ್ಲಿ ಗಂಗಾ ದಂಡಿ ಪ್ರಥಮ ಸ್ಥಾನ ಪಡೆದರು. ವಿವಿಧ ವಯೋಮಿತಿ ವಿಭಾಗಗಳಲ್ಲಿಯೂ ಸ್ಪರ್ಧೆಗಳು ನಡೆದವು.
ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿ ಹಾಗೂ ಪದಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಕ್ರೀಡಾ ಅಧಿಕಾರಿಗಳು, ಸೈಕ್ಲಿಂಗ್ ಸಂಘದ ಪದಾಧಿಕಾರಿಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.

Tags:

error: Content is protected !!