ಚಿಕ್ಕೋಡಿಯ ಸಿ.ಟಿ.ಇ. ಸಂಸ್ಥೆಯ ಶ್ರೀಮತಿ ಡಿ.ಕೆ. ಶಹಾ ಕನ್ನಡ ಮತ್ತು ಮರಾಠಿ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೆ.ಎಲ್.ಇ. ಸಂಸ್ಥೆಯ ಎಂ.ಬಿ.ಎ. ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರಾದ ಡಾಸಂಜಯ ಹನಗಂಡಿ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಶಿಸ್ತು ಮತ್ತು ಸಂಸ್ಕಾರದ ಜೊತೆಗೆ ಯೋಗ ಹಾಗೂ ವ್ಯಾಯಾಮ ಅತ್ಯಂತ ಅವಶ್ಯಕವಾಗಿದೆ” ಎಂದು ಅಭಿಪ್ರಾಯಪಟ್ಟರು. ಇದೇ ವೇಳೆ ಅವರು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯರಾದ ಆರ್.ಪಿ. ದೊಡ್ಡಮನಿ ಅವರು ಮಾತನಾಡಿ ಉದ್ಘಾಟನೆಗೊಂಡಿರುವ ವಿವಿಧ ಸಂಘಗಳ ಚಟುವಟಿಕೆಗಳಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು, ಇದರ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಹ-ಶಿಕ್ಷಕರಾದ ಶ್ರೀ ಬಿ.ಎ. ನೇಜೆ ಅವರು ಕಾರ್ಯಕ್ರಮದ ಮಹತ್ವ, ಉದ್ದೇಶ ಹಾಗೂ ಇದರಿಂದ ವಿದ್ಯಾರ್ಥಿಗಳಿಗೆ ಆಗುವ ಅನುಕೂಲಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಹ-ಶಿಕ್ಷಕಿ ಕುಮಾರಿ ಪಿ.ಎಸ್. ಕಾಂಬಳೆ ಅವರು ಅತಿಥಿಗಳನ್ನು ಪರಿಚಯಿಸಿದರು.ಸಹ-ಶಿಕ್ಷಕರಾದ ಶ್ರೀ ಎಸ್.ಎ. ಕಾಂಬಳೆ ಅವರು ಕಾರ್ಯಕ್ರಮದ ಕೊನೆಯಲ್ಲಿ ವಂದನಾರ್ಪಣೆ ಮಾಡಿದರು.
ಸಹ-ಶಿಕ್ಷಕಿ ಶ್ರೀಮತಿ ಬಿ. ಎ. ಸಾತವಾರ ಅವರು ಇಡೀ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಶಾಲೆಯ ಸಮಸ್ತ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
