ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಜುಲೈ 26ರಂದು 27ನೇ ಕಾರ್ಗಿಲ್ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ನೆಹರೂ ನಗರದ ಕೆಪಿಟಿಸಿಎಲ್ ಸಭಾಂಗಣದಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಹುತಾತ್ಮ ವೀರಯೋಧರ ಕುಟುಂಬಸ್ಥರು ಹಾಗೂ ನಿವೃತ್ತ ಸೈನಿಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಬಸಪ್ಪ ತಳವಾರ್ ತಿಳಿಸಿದ್ದಾರೆ.


ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ನೆಹರೂ ನಗರದಲ್ಲಿರುವ ಕೆಪಿಟಿಸಿಎಲ್ ಸಭಾಂಗಣದಲ್ಲಿ ಜುಲೈ 26ರ ಭಾನುವಾರದಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಕಾರ್ಗಿಲ್ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಿಸಲಾಗುತ್ತಿದೆ. ಸಮಾರಂಭದಲ್ಲಿ ಅಂಧ ಹಾಗೂ ಅನಾಥ ಮಕ್ಕಳಿಗೆ ನೆರವಿನ ಪ್ರೋತ್ಸಾಹ ಧನ ವಿತರಿಸಲಾಗುವುದು. ಇದರೊಂದಿಗೆ ಕಾರ್ಗಿಲ್ ಯುದ್ಧ ಮತ್ತು ಆಪರೇಷನ್ ವಿಜಯ್ನಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಹುತಾತ್ಮ ವೀರಯೋಧರ ಕುಟುಂಬಸ್ಥರನ್ನು ಹಾಗೂ ಸಮಾಜ ಸೇವೆಯಲ್ಲಿ ಸಕ್ರಿಯರಾಗಿರುವ ನಿವೃತ್ತ ಯೋಧರಿಗೆ ‘ಜನರಲ್ ಕಾರ್ಯಪ್ಪ’ ಮತ್ತು ‘ಸೈನಿಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ವಿವರಿಸಿದರು.
ಇನ್ನೊರ್ವರೂ ಮಾತನಾಡಿ
ಈ ಬೃಹತ್ ಸಮಾರಂಭಕ್ಕೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹಾಗೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜ್ಯೋತಿ ಬೆಳಗಿಸಲಿದ್ದು, ಹಲವು ಜನಪ್ರತಿನಿಧಿಗಳು ಹಾಗೂ ಉನ್ನತ ಸೇನಾಧಿಕಾರಿಗಳು ಭಾಗವಹಿಸಲಿದ್ದಾರೆ. ದೇಶದ ರಕ್ಷಣೆಗಾಗಿ ಹೋರಾಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಈ ಪುಣ್ಯ ಕಾರ್ಯಕ್ರಮದಲ್ಲಿ ಸೈನಿಕರ ಕುಟುಂಬಸ್ಥರು, ಯುವಜನರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮಾಜಿ ಸೈನಿಕರ ಸಂಘ ಮನವಿ ಮಾಡಿದರು.
