Belagavi

ಮಾರಿಹಾಳ ಠಾಣೆಯಲ್ಲಿ ಎಸಿಪಿ ಸಭೆ: ದಲಿತ ಕಾಲನಿಗಳ ಸುರಕ್ಷತೆಗೆ ಲಕ್ಷ್ಮಣ ಕೋಲಕಾರ ಮನವಿ

Share

ಬೆಳಗಾವಿಯ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬೆಳಗಾವಿ ಗ್ರಾಮೀಣ ಎಸಿಪಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಕುಂದುಕೊರತೆ ಸಭೆ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಲಕ್ಷ್ಮಣ ದಶರಥ ಕೋಲಕಾರ ಅವರು, ಎಸ್‌ಸಿ/ಎಸ್‌ಟಿ ಸಮುದಾಯದ ಹಕ್ಕುಗಳ ರಕ್ಷಣೆ ಹಾಗೂ ದಲಿತ ಕಾಲೊನಿಗಳ ಸುರಕ್ಷತೆಗೆ ಪೊಲೀಸ್ ಇಲಾಖೆ ಆದ್ಯತೆ ನೀಡಬೇಕೆಂದು ಆಗ್ರಹಿಸಿದರು.

ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಎಸಿಪಿ ಬೆಳಗಾವಿ ಗ್ರಾಮೀಣ ಅವರ ಅಧ್ಯಕ್ಷತೆ ಹಾಗೂ ಸಿಪಿಐ ಪಾಟಣಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಶಕ್ತಿ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಣ ದಶರಥ ಕೋಲಕಾರ ಭಾಗವಹಿಸಿ ಪ್ರಮುಖ ವಿಷಯಗಳನ್ನು ಮಂಡಿಸಿದರು. ಸಮುದಾಯದ ಹಕ್ಕುಗಳ ರಕ್ಷಣೆ, ಸುಳ್ಳು ದೂರುಗಳ ವಿರುದ್ಧ ಕಾನೂನುಬದ್ಧ ಕ್ರಮ ಹಾಗೂ ದಲಿತ ಕಾಲೊನಿಗಳಲ್ಲಿ ಬಿಗಿ ಭದ್ರತೆ ವಹಿಸುವಂತೆ ಅವರು ಎಸಿಪಿ ಅವರಿಗೆ ಮನವಿ ಮಾಡಿದರು. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ದುರ್ಬಲ ವರ್ಗಗಳಿಗೆ ಸಮಾನ ನ್ಯಾಯ ದೊರಕಿಸಿಕೊಡಲು ಪೊಲೀಸ್ ಇಲಾಖೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಿ, ತಮ್ಮ ಸಲಹೆ-ಪ್ರಶ್ನೆಗಳನ್ನು ಮಂಡಿಸಿದರು.

Tags:

error: Content is protected !!