ಇದೇ ಜುಲೈ 19 ರಂದು ಸಂಚಾರಿ ನಿಯಮ ಉಲ್ಲಂಘನೆ 50% ದಂಡ ರಿಯಾಯತಿ ಹಿನ್ನಲೆಯಲ್ಲಿ ಧಾರವಾಡದಲ್ಲಿ ನಿಯಮ ಉಲ್ಲಂಘಿಸಿದ ವಾಹನ ಸವಾರರು ಸರದಿ ಸಾಲಿನಲ್ಲಿ ನಿಂತು ದಂಡ ಕಟ್ಟುವ ಮೂಲಕ ನಿಟ್ಟುಸಿರು ಬಿಟ್ಟಿದ್ದಾರೆ.


ಹೌದು…ಸಂಚಾರಿ ನಿಯಮ ಉಲ್ಪಂಘನೆಗೆ ಸರ್ಕಾರ ವಾಹನ ಸವಾರರಿಗೆ ದಂಡದಲ್ಲಿ 50% ಆಫ್ ಮಾಡಿದ್ದು, ಈ ಹಿನ್ನಲೆಯಲ್ಲಿ ಧಾರವಾಡ ಸಂಚಾರಿ ಪೊಲೀಸ ಠಾಣೆಯ ವ್ಯಾಪ್ತಿಯ ಹೊಸಯಲ್ಲಾಪುರದಲ್ಲಿ ವಾಹನ ಸವಾರರು ಸರದಿ ಸಾಲಿನಲ್ಲಿ ನಿಂತು ದಂಡ ಕಟ್ಟಿದ್ದರು. ಧಾರವಾಡ ಸೇರಿದಂತೆ ವಿವಿಧ ಕಡೆಗಳಲ್ಲಿ ವಾಹನಗಳು ಸಂಚಾರಿ ನಿಯಮಗಳ ಉಲ್ಲಂಘಿಸಿದ ಪ್ರಕರಣಗಳಿಗೆ ಅರ್ಧ ದಂಡ ತುಂಬಿ ಜನರು ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರು. ಧಾರವಾಡ ಸಂಚಾರಿ ಠಾಣೆಯ ಸಿಬ್ಬಂದಿ ವಿಠಲ್ ಹಾಗೂ ಅಡಿವೆಪ್ಪ ರವರು ವಾಹನ ಸವಾರರಿಂದ ದಂಡ ಸಂಗ್ರಹಿಸಿ, ವಾಹನ ಸವಾರರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಜಾಗೃತಿ ಮೂಡಿಸಿದರು.
