Dharwad

ಮನೆಯಲ್ಲಿ ಗೀಸರ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಧಾರವಾಡದ ಅಣ್ಣಿಗೇರಿ ಪಟ್ಟಣದಲ್ಲಿ ನಡೆದಿದೆ.

Share

ಧಾರವಾಡ ಜಿಲ್ಲಾಯ ಅಣ್ಣಿಗೇರಿ ತಾಲೂಕಿನ ಉದಯ ನಗರದಲ್ಲಿನ ಮೊಹಮ್ಮದ್ ಅಲಿ ಧಾರವಾಡ ಅವರಿಗೆ ಸೇರಿದ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಒಂದೇ ಕುಟುಂಬದವ ಮೂರಿಗೆ ಗಂಭೀರ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಸಂಪೂರ್ಣ ಕುಸಿದು ಬಿದ್ದಿದ್ದು, ಅವಶೇಷಗಳು ಅಕ್ಕಪಕ್ಕದ ಮನೆಗಳ ಮೇಲೆ ಬಿದ್ದಿವೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ತಾಯಿ ಹಾಗೂ ಇಬ್ಬರು ಮಕ್ಕಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags:

error: Content is protected !!