Uncategorized

ಅಸೋಗಾ ರಾಮಲಿಂಗೇಶ್ವರ ಸನ್ನಿಧಿಯಲ್ಲಿ ಅಂಜಲಿ ನಿಂಬಾಳ್ಕರ್ ಪೂಜೆ: ಮಲಪ್ರಭಾ ನದಿ ಹರಿವು ವೀಕ್ಷಣೆ, ಜನತೆಯ ಕಲ್ಯಾಣಕ್ಕೆ ಪ್ರಾರ್ಥನೆ!

Share

ಖಾನಾಪುರ ತಾಲೂಕಿನ ಸುಪ್ರಸಿದ್ಧ ಪುಣ್ಯಕ್ಷೇತ್ರ ಅಸೋಗಾದ ರಾಮಲಿಂಗೇಶ್ವರ ದೇವಾಲಯಕ್ಕೆ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದೇ ವೇಳೆ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಲಪ್ರಭಾ ನದಿಯ ನೀರಿನ ಹರಿವನ್ನು ಖುದ್ದಾಗಿ ಪರಿಶೀಲಿಸಿದರು.

ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ಖಾನಾಪುರ ತಾಲೂಕಿನ ಐತಿಹಾಸಿಕ ಅಸೋಗಾ ರಾಮಲಿಂಗೇಶ್ವರ ದೇವಾಲಯಕ್ಕೆ ಭೇಟಿ ನೀಡಿ, ಶಿವನಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಕ್ಷೇತ್ರದ ಜನತೆಗೆ ಒಳಿತಾಗಲಿ, ತಾಲೂಕಿನಲ್ಲಿ ಉತ್ತಮ ಮಳೆ-ಬೆಳೆಯಾಗಿ ರೈತರು ಸುಖವಾಗಿರಲಿ ಹಾಗೂ ಪ್ರತಿಯೊಬ್ಬರೂ ಆರೋಗ್ಯದಿಂದ ಬಾಳಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ತದನಂತರ ಮಲಪ್ರಭಾ ನದಿಯ ತೀರಕ್ಕೆ ತೆರಳಿ, ಪ್ರಸ್ತುತ ನದಿಯ ನೀರಿನ ಹರಿವಿನ ಮಟ್ಟವನ್ನು ವೀಕ್ಷಿಸಿ ವಿಶ್ಲೇಷಣೆ ನಡೆಸಿದರು. ಈ ಸಂದರ್ಭದಲ್ಲಿ ಖಾನಾಪುರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದ್ಯಾಮಣ್ಣ ಬಸರೀಕಟ್ಟಿ, ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಅಧ್ಯಕ್ಷ ಭರತೇಶ ತೋರೋಜಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಾಬು ಹತ್ತರವಾಡ, ಮುಖಂಡರಾದ ರುದ್ರಪ್ಪ ಪಾಟೀಲ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!