Khanapur

ಎಐಸಿಸಿ ಕಾರ್ಯದರ್ಶಿ ಅಂಜಲಿ ನಿಂಬಾಳ್ಕರ್‌ಗೆ ಕೆಪಿಸಿಸಿಯಿಂದ ಮತ್ತೊಂದು ಜವಾಬ್ದಾರಿ: ‘ಎಸ್ ಐ ಆರ್’ ಪ್ರಕ್ರಿಯೆ ವೀಕ್ಷಕರಾಗಿ ನೇಮಕ!

Share

ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಖಾನಾಪುರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಈಗ ಮತ್ತೊಂದು ಹೈ-ವೋಲ್ಟೇಜ್ ಜವಾಬ್ದಾರಿ ಸಿಕ್ಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ‘ಎಸ್ ಐಆರ್’ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಎಐಸಿಸಿ ವತಿಯಿಂದ ಗೋವಾ ಸೇರಿದಂತೆ ವಿವಿಧ ರಾಜ್ಯಗಳ ಉಸ್ತುವಾರಿ ಹೊಣೆ ಹೊತ್ತು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ, ಕೆಪಿಸಿಸಿ ಇದೀಗ ಕಿತ್ತೂರು ಕರ್ನಾಟಕ ಭಾಗದ ಉಸ್ತುವಾರಿಯನ್ನು ನೀಡಿದೆ. ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಉತ್ತರ ಕನ್ನಡ, ಹುಬ್ಬಳ್ಳಿ ನಗರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲೆಗಳ ವೀಕ್ಷಕರಾಗಿ ಅವರು ನಿಯುಕ್ತಿಗೊಂಡಿದ್ದಾರೆ. ಈ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿರುವ ಅವರು, ಪಕ್ಷದ ಮಾರ್ಗಸೂಚಿಗಳ ಅನ್ವಯ ‘ಎಸ್ ಐಆರ್’ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದೆಯೇ ಎಂಬುದನ್ನು ಪರಾಮರ್ಶಿಸಿ, ಸ್ಥಳೀಯ ನಾಯಕರಿಗೆ ಅಗತ್ಯ ಸಹಕಾರ ನೀಡಿ ಕೆಪಿಸಿಸಿಗೆ ವರದಿ ಸಲ್ಲಿಸಲಿದ್ದಾರೆ. ಡಾ. ಅಂಜಲಿ ಅವರ ಸಂಘಟನಾತ್ಮಕ ಚತುರತೆಯಿಂದಾಗಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಪಕ್ಷದ ಈ ಪ್ರಕ್ರಿಯೆಗೆ ಹೊಸ ಹುರುಪು ಬರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Tags:

error: Content is protected !!