Uncategorized

*ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ: ಇಒ ಯಶವಂತ ಕುಮಾರ*

Share

ಬೆಳಗಾವಿ: ಮತದಾರರ ಪಟ್ಟಿಯನ್ನು ಶುದ್ದೀಕರಿಸುವ ಉದ್ದೇಶದಿಂದ ಕೈಗೊಳ್ಳಲಾ ಗುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಪ್ರಕ್ರಿಯೆಗೆ ಸಾರ್ವ ಜನಿಕರು ಹಾಗೂ ನಾಗರಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ ಅವರು ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿಗಳ ಮಟ್ಟದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮಗಳು ಹಾಗೂ ಜಾಥಾ ಮೆರವಣಿಗೆಗಳನ್ನು ಕೈಗೊಂಡು, ಮತದಾರರಿಗೆ ಅರಿವು ಮೂಡಿಸಲಾಗುತ್ತಿದ್ದು, ಜುಲೈ 29 ರವರೆಗೆ ನಡೆಯುವ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಗಳು) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಈ ವೇಳೆ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಮತದಾರರು ಅವುಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೊಸ ಮತದಾರರ ಹೆಸರು ಸೇರ್ಪಡೆ, ಹೆಸರು ಹಾಗೂ ವಿಳಾಸ ತಿದ್ದುಪಡಿ, ಮೃತಪಟ್ಟವರು ಮತ್ತು ಹೆಸರುಗಳನ್ನು ಸ್ಥಳಾಂತರಗೊಂಡವರ ಪಟ್ಟಿಯಿಂದ ತೆಗೆದುಹಾಕುವ ಕಾರ್ಯವೂ ಇದೇ ಅವಧಿಯಲ್ಲಿ ನಡೆಯಲಿದೆ.. ಆಗಸ್ಟ್ 5 ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದ್ದು, ಆ.5 ರಿಂದ ಸೆ. 4 ರವರೆಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ಅವಕಾಶವಿದೆ. ಹಾಗೇ ಅಕ್ಟೋಬರ್ 3 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳ ವಿಚಾರಣೆ ಹಾಗೂ ವಿಲೇವಾರಿ ನಡೆಯಲಿದ್ದು, ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ಪ್ರಸ್ತುತ ಪರಿಷ್ಕರಣೆ ಪ್ರಕ್ರಿಯೆಯಿಂದ ನೈಜ ಮತದಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಆದ್ದರಿಂದ ಬೆಳಗಾವಿ ತಾಲ್ಲೂಕಿನ ಸಾರ್ವಜನಿಕರು ಎಸ್ಐಆರ್ ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:

error: Content is protected !!