Uncategorized

ಬಾಗಲಕೋಟೆ ಭೀಕರ ದುರಂತ: ಕೃಷ್ಣಾ ನದಿ ಸೇತುವೆಯಿಂದ ಕೆಳಕ್ಕೆ ಬಿದ್ದ ಟಿಪ್ಪರ್, ಚಾಲಕ ಸಾವು!

Share

ಬಾಗಲಕೋಟೆಯಲ್ಲಿ ಕೃಷ್ಣಾ ನದಿಯ ಬೃಹತ್ ಸೇತುವೆಯ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಟಿಪ್ಪರ್ ನಿಯಂತ್ರಣ ತಪ್ಪಿ ನೇರವಾಗಿ ನದಿಗೆ ಉರುಳಿದ್ದು, ದುರಂತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಅದೃಷ್ಟವಶಾತ್ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಹಾಗೂ ವಿಜಯಪುರ ಜಿಲ್ಲೆಯ ಕೋಲಾರ ನಡುವೆ ಇರುವ ಕೃಷ್ಣಾ ನದಿಯ ರಾಜ್ಯದ ಅತಿ ಉದ್ದದ ಸೇತುವೆಯ ಮೇಲೆ ಈ ಭೀಕರ ಅಪಘಾತ ನಡೆದಿದೆ. ಗದ್ದನಕೇರಿಯಿಂದ ಕೊಲ್ಲಾರಕ್ಕೆ ಹೊರಟಿದ್ದ ಟಿಪ್ಪರ್, ಸುಮಾರು ಮೂರು ಕಿಲೋಮೀಟರ್ ಉದ್ದವಿರುವ ಈ ಸೇತುವೆಯ ಮೇಲೆ ಚಲಿಸುತ್ತಿದ್ದಾಗ ಮುಂಭಾಗದಲ್ಲಿದ್ದ ಕಾರಿಗೆ ಜೋರಾಗಿ ಗುದ್ದಿದೆ; ಪರಿಣಾಮವಾಗಿ ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆಗೋಡೆ ಮುರಿದು ನೇರವಾಗಿ ನದಿಯೊಳಗೆ ಬಿದ್ದಿದೆ. ಈ ಭೀಕರ ದುರಂತದಲ್ಲಿ ಟಿಪ್ಪರ್ ಚಾಲಕ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ವಾಹನದಲ್ಲಿದ್ದ ಕ್ಲೀನರ್ ಸಂಜು ತೀವ್ರ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನದಿಯಲ್ಲಿ ಟಿಪ್ಪರ್ ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಬೀಳಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Tags:

error: Content is protected !!