Belagavi

ಬೆಳಗಾವಿ: ನಗರದಲ್ಲಿ ಡೆಂಗಿ ವಿರೋಧಿ ಮಾಸಾಚರಣೆ; ಮೇಯರ್ ಪ್ರೀತಿ ಕಾಮಕರ ಚಾಲನೆ!

Share

ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಗರದಲ್ಲಿ ‘ಡೆಂಗಿ ವಿರೋಧಿ ಮಾಸಾಚರಣೆ’ಗೆ ಅದ್ಧೂರಿ ಚಾಲನೆ ನೀಡಲಾಗಿದೆ. ಮೇಯರ್ ಪ್ರೀತಿ ಸಂಜೀವ ಕಾಮಕರ ಅವರು ಜಾಗೃತಿ ಜಾಥಾ ಉದ್ಘಾಟಿಸಿ, ಪ್ರತಿಯೊಬ್ಬರೂ ಪರಿಸರ ಸ್ವಚ್ಛವಾಗಿಟ್ಟುಕೊಂಡು ಸೊಳ್ಳೆಗಳ ನಿಯಂತ್ರಣಕ್ಕೆ ಕೈಜೋಡಿಸುವಂತೆ ಕರೆ ನೀಡಿದ್ದಾರೆ.

ಬೆಳಗಾವಿ ನಗರದಲ್ಲಿ ಆಯೋಜಿಸಲಾಗಿದ್ದ ಡೆಂಗಿ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಹಾಪೌರರಾದ ಪ್ರೀತಿ ಸಂಜೀವ ಕಾಮಕರ, ಮಳೆಗಾಲ ಆರಂಭವಾಗಿರುವುದರಿಂದ ಸೊಳ್ಳೆಗಳಿಂದ ಹರಡುವ ರೋಗಗಳ ಭೀತಿ ಹೆಚ್ಚಾಗುವ ಸಾಧ್ಯತೆಯಿದೆ. ಸೊಳ್ಳೆಗಳ ನಿಯಂತ್ರಣ ಹಾಗೂ ನಾಶ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಆರೋಗ್ಯ ಇಲಾಖೆಯ ಮಾರ್ಗದರ್ಶನದಂತೆ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಕೆಎಲ್‌ಇ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿದ ಅವರು, ನಗರದಾದ್ಯಂತ ತೀವ್ರವಾಗಿ ಲಾರ್ವಾ ಸಮೀಕ್ಷೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಜಗದೀಶ ಜಿಂಗಿ, ನಗರದಲ್ಲಿ ಪ್ರಸ್ತುತ 1 ಮಲೇರಿಯಾ, 6 ಡೆಂಗಿ ಹಾಗೂ 4 ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು. ಇಲಾಖೆ ಸಿಬ್ಬಂದಿ ನಿರಂತರವಾಗಿ ಜ್ವರ ಮತ್ತು ಲಾರ್ವಾ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಕಾರ್ಯಕ್ರಮದ ಬಳಿಕ ಕೆಎಲ್‌ಇ ನರ್ಸಿಂಗ್ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ನಗರದ ವಿವಿಧೆಡೆ ಲಾರ್ವಾ ಸಮೀಕ್ಷೆ ನಡೆಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಈಶ್ವರಪ್ಪಾ ಪಿ. ಗಡಾದ, ತಾಲೂಕಾ ಆರೋಗ್ಯಾಧಿಕಾರಿ ಡಾ. ಸಂಜೀವ ನಾಂದ್ರೆ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

Tags:

error: Content is protected !!