Belagavi

ಬೆಳಗಾವಿ ಚೇಂಬರ್ ಆಫ್ ಕಾಮರ್ಸ್: ನೂತನ ಅಧ್ಯಕ್ಷರಾಗಿ ಸ್ವಪ್ನಿಲ್ ಶಾ ಆಯ್ಕೆ!

Share

ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್‌ನ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಮುಗಿದಿದೆ. ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸ್ವಪ್ನಿಲ್ ಶಾ ಅಧಿಕಾರ ವಹಿಸಿಕೊಂಡಿದ್ದಾರೆ. ನಿರ್ಗಮಿತ ಅಧ್ಯಕ್ಷರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಕಾರ್ಯಕಾರಿ ಸಮಿತಿಯ ಪ್ರಮುಖ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಆಯ್ಕೆ ಮಾಡಲಾಗಿದೆ.

ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (BCCI) ನೂತನ ಕಾರ್ಯಕಾರಿ ಸಮಿತಿ ಸಭೆಯಲ್ಲಿ 2026-27ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಸ್ವಪ್ನಿಲ್ ಶಾ ಆಯ್ಕೆಯಾಗಿದ್ದರೆ, ಉದಯ ಜೋಶಿ ಹಿರಿಯ ಉಪಾಧ್ಯಕ್ಷರಾಗಿ ಹಾಗೂ ರಾಜೇಂದ್ರ ಮುತಗೆಕರ್ ದ್ವಿತೀಯ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಗೌರವ ಕಾರ್ಯದರ್ಶಿಯಾಗಿ ಮನೋಜಕುಮಾರ್ ಎನ್. ಮತ್ತಿಕೊಪ್ಪ, ಜಂಟಿ ಕಾರ್ಯದರ್ಶಿಯಾಗಿ ವಿನಿತ್ ಹರಕುಣಿ ಮತ್ತು ಖಜಾಂಚಿಯಾಗಿ ರಮೇಶ್ ಲದ್ದಡ್ ಆಯ್ಕೆಯಾಗಿದ್ದಾರೆ. ನಿರ್ಗಮಿತ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಹಾಗೂ ಕಾರ್ಯದರ್ಶಿ ಸತೀಶ್ ಕುಲಕರ್ಣಿ ಉಪಸ್ಥಿತಿಯಲ್ಲಿ ಈ ಆಯ್ಕೆ ನಡೆಯಿತು. ಇದಕ್ಕೂ ಮುನ್ನ ನಡೆದ 2025-26ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಸಭೆಯಲ್ಲಿ ನಿರ್ಗಮಿತ ಅಧ್ಯಕ್ಷರು ಸರ್ವರಿಗೂ ಧನ್ಯವಾದ ಅರ್ಪಿಸಿದರು. ಸಭೆಯಲ್ಲಿ ವ್ಯಾಪಾರ ಮತ್ತು ಕೈಗಾರಿಕಾ ವಲಯದ ಆಜೀವ ಹಾಗೂ ವಾರ್ಷಿಕ ಸದಸ್ಯರನ್ನು ಒಳಗೊಂಡ ಬಲವಾದ ನೂತನ ಸಮಿತಿಯನ್ನು ರಚಿಸಲಾಯಿತು.

Tags:

error: Content is protected !!