“ಸಾಲ ತೀರಿಸಿದರೂ ಮತ್ತಷ್ಟು ಹಣಕ್ಕಾಗಿ ಪೀಡಿಸಿ, ಜೀವ ಬೆದರಿಕೆ ಹಾಕುತ್ತಿದ್ದ ಅಕ್ರಮ ಬಡ್ಡಿ ಉದ್ಯಮಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಬಡ್ಡಿ ವ್ಯವಹಾರ ನಡೆಸಿ ಸಾಲಗಾರರಿಗೆ ಕಿರುಕುಳ ಹಾಗೂ ಜೀವ ಬೆದರಿಕೆ ಹಾಕುತ್ತಿದ್ದ ಆರೋಪದಡಿ ಪರಾರಿಯಾಗಿದ್ದ ಸದಾನಂದ ಭೀಮರಾವ ಹಲಗೆ (47) ಎಂಬಾತನನ್ನು ಸಂಕೇಶ್ವರ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಕರಜಗಾ ಗ್ರಾಮದ ಮಹಿಳೆಯೊಬ್ಬರು ನೀಡಿದ ದೂರಿನನ್ವಯ, ಸಾಲದ ಅಸಲು ಮತ್ತು ಬಡ್ಡಿ ಸೇರಿ ಈಗಾಗಲೇ 36.77 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದ್ದರೂ, ಆರೋಪಿಯು ಹೆಚ್ಚುವರಿಯಾಗಿ 4.64 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜುಲೈ 22ರಂದು ಕಣಗಲಾ ಗ್ರಾಮದ ಬಳಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
