Athani

ಅಥಣಿಯಲ್ಲಿ ಸೈಕಲ್ ಕಳ್ಳತನ: ಸಿಸಿಟಿವಿ ಕ್ಯಾಮೆರಾದಲ್ಲಿ ಲೈವ್ ಆಗಿ ಸೆರೆಯಾಯ್ತು ಖದೀಮರ ಕೈಚಳಕ!

Share

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸೈಕಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಳ್ಳತನ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಪಟ್ಟಣದ ಗುಂಜಿಗಾವಿ ದವಾಖಾನೆ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಸೈಕಲ್‌ನ್ನು ದುಷ್ಕರ್ಮಿಗಳು ಕಳವು ಮಾಡಿದ್ದಾರೆ. ಪ್ರಶಾಂತ ಚವ್ಹಾಣಗೆ ಸೇರಿದ ಸೈಕಲ್ ಕಳ್ಳತನವಾಗಿರುವುದು ತಿಳಿದುಬಂದಿದೆ. ಕಳ್ಳತನದ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಕಳ್ಳರ ಚಲನವಲನ ಸ್ಪಷ್ಟವಾಗಿ ಸೆರೆಯಾಗಿದೆ.ಪಟ್ಟಣದಲ್ಲಿ ಸೈಕಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಸ್ಥಳೀಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

Tags:

error: Content is protected !!