Belagavi

ಪಿಎಂ ನಿಂದನೆ ಹಾಗೂ ಶಾಸಕರ ಮೇಲಿನ ಹಲ್ಲೆ ಖಂಡಿಸಿ ಬಿಜೆಪಿ ಬೃಹತ್ ಪ್ರತಿಭಟನೆ – ಕಾಂಗ್ರೆಸ್ ಭವನ ಮುತ್ತಿಗೆಗೆ ಯತ್ನ!

Share

ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ನೆಪದಲ್ಲಿ ಪ್ರಧಾನಿ ಮೋದಿಯವರ ನಿಂದನೆ, ದೇಶದ್ರೋಹಿ ಘೋಷಣೆ ಹಾಗೂ ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆಗೆ ಯತ್ನಿಸಿದ ಘಟನೆಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ರಾಣಿ ಚೆನ್ನಮ್ಮ ವೃತ್ತದಿಂದ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ತೆರಳಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಹೆಸರಿನಲ್ಲಿ ದೇಶದ ಪ್ರಧಾನಿ ಅವರ ನಿಂದನೆ, ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆಗೆ ಯತ್ನದಂತಹ ಘಟನೆಗಳನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಬಿಜೆಪಿ ತೀವ್ರ ಪ್ರತಿಭಟನೆಯನ್ನು ನಡೆಸಿತು.

ಇಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಿಂದ ಬಿಜೆಪಿಯೂ ಬೃಹತ್ ಪ್ರತಿಭಟನೆಯನ್ನು ನಡೆಸಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯ ಹೆಸರಿನಲ್ಲಿ ದೇಶದ ಪ್ರಧಾನಿ ಅವರ ನಿಂದನೆ, ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆಗೆ ಯತ್ನದಂತಹ ಘಟನೆಗಳನ್ನು ಘೋಷಣೆಗಳನ್ನು ಕೂಗುತ್ತ ತೀವ್ರವಾಗಿ ಖಂಡಿಸಿತು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನೀಲ್ ಬೆನಕೆ ಅವರು ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾಂಗ್ರೆಸ್ ತನ್ನ ಬೇಳೆಯನ್ನು ಬೇಯಿಸಿಕೊಳ್ಳುತ್ತಿದೆ. ಅಲ್ಲದೇ ದೇಶದ್ರೋಹಿಗಳ ಫೋಟೋಗಳನ್ನು ಬಳಸಿ ಪ್ರತಿಭಟಿಸಲಾಗುತ್ತಿದೆ. ವಿದ್ಯಾರ್ಥಿಗಳು ತಮಗಾದ ಅನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದಾರೆ. ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ದೇಶದ್ರೋಹಿ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಬೆಳಗಾವಿಯಲ್ಲಿಯೂ ಕಳೆದ ದಿನ ನಡೆದ ಪ್ರತಿಭಟನೆಯಲ್ಲಿ ಪಿಎಂ ಮೋದಿ ವಿರುದ್ಧ ಅಭದ್ರ ಶಬ್ದಗಳನ್ನು ಬಳಸಲಾಗಿದೆ. ಬೆಳಗಾವಿಯಲ್ಲಿ ಪಿಎಂ ಮೋದಿ ವಿರುದ್ಧ ಮತ್ತು ಸ್ವಾತಂತ್ರ್ಯ ಬೇಕೆಂದು ಘೋಷಣೆಗಳನ್ನು ನೀಡಿದರೇ ಸಹಿಸುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದರು.

ಇನ್ನು ಮಾಜಿ ಶಾಸಕ ಅರವಿಂದ ಪಾಟೀಲ್ ಅವರು ಬೆಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದ ಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸುವ ಕೆಲಸವನ್ನು ಮಾಡಿದ್ದಾರೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಪಿಎಂ ಮೋದಿ ಅವರನ್ನು ಪ್ರತಿಭಟನೆಯ ವೇಳೆ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಲಾಗಿದೆ. ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದಾರೆ. ಅದರ ಕಡೆ ಸರ್ಕಾರ ಗಮನ ಹರಿಸುತ್ತಿಲ್ಲವೆಂದು ದೂರಿದರು.

ಮಾಜಿ ಎಂ.ಎಲ್.ಸಿ ಮಹಾಂತೇಶ್ ಕವಟಗಿಮಠ ಮತ್ತು ಬಿಜೆಪಿ ಮುಖಂಡರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ, ಪ್ರತಿಭಟನೆಯ ನೆಪದಲ್ಲಿ ದೇಶದ್ರೋಹಿ ಹೇಳಿಕೆಗಳನ್ನು ಘೋಷಣೆಗಳನ್ನು ನೀಡಿದವರನ್ನು ವಿಡ್ಹಿಯೋ ಕ್ಲೀಪಿಂಗ್ ಮೂಲಕ ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ತೆರಳಲು ಮುಂದಾದರೂ ಈ ವೇಳೆ ಪೊಲೀಸರು ಅವರನ್ನು ತಡೆದರು. ಈ ಹಿನ್ನೆಲೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ ಉಂಟಾಯಿತು. ಬ್ಯಾರಿಕೇಡ್ ನೂಕಿ ಕಾಂಗ್ರೆಸ್ ಭವನದತ್ತ ಪ್ರತಿಭಟನಾ ರ್ಯಾಲಿ ಕರೆದೊಯ್ಯುತ್ತಿದ್ದವರನ್ನು ಕೊನೆಗೂ ಪೊಲೀಸರು ಹರಸಾಹಸ ಪಟ್ಟು ತಡೆಯುವಲ್ಲಿ ಯಶಸ್ವಿಯಾದರು.

ಈ ವೇಳೆ ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.

Tags:

error: Content is protected !!