Vijaypura

ಜುಲೈ 14ರಂದು ವಿಜಯಪುರಕ್ಕೆ ಬಾಲಿವುಡ್ ನಟ ಗೋವಿಂದಾ ಆಗಮನ

Share

ಬಾಲಿವುಡ್‌ನ ಖ್ಯಾತ ನಟ ಗೋವಿಂದಾ ಅವರು ಜುಲೈ 14ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ. ನಗರದಲ್ಲಿ ನಡೆಯಲಿರುವ ದುರ್ಗಾದೇವಿಯ ವಾರ್ಷಿಕೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಅವರು ಭಾಗವಹಿಸಲಿದ್ದು, ಈ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ವಿಜಯಪುರ ಪ್ರವಾಸದ ಕುರಿತು ಪ್ರತಿಕ್ರಿಯಿಸಿರುವ ನಟ ಗೋವಿಂದಾ, “ವಿಜಯಪುರದ ಎಲ್ಲರಿಗೂ ನನ್ನ ನಮಸ್ಕಾರ. ದುರ್ಗಾದೇವಿ ಎಲ್ಲರಿಗೂ ಒಳ್ಳೆಯದು ಮಾಡಲಿ, ಎಲ್ಲರ ಜೀವನ ಸುಖ-ಸಮೃದ್ಧಿಯಿಂದ ಕೂಡಿರಲಿ” ಎಂದು ಶುಭ ಹಾರೈಸಿದ್ದಾರೆ. ಗೋವಿಂದಾ ಅವರ ಆಗಮನದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ.

Tags:

error: Content is protected !!