ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಸರಣಿ ಡಿಕ್ಕಿಯಲ್ಲಿ ವೃದ್ಧರೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಡೊಂಬರಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಂಗಳೂರು ಮೂಲದ ವಿಶ್ವನಾಥ್ ಮರಾಠೆ (80) ಎಂಬುವವರು ಸ್ಥಳದಲ್ಲೇ ಅಸುವಾಗಲಿದ್ದಾರೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿಯಾಗಿ, ಬಳಿಕ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಬಲವಾಗಿ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮತ್ತೂ ಮೂವರು ತೀವ್ರ ಗಾಯಗೊಂಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದು, ಘಟನೆ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
