Belagavi

ಬೆಳಗಾವಿಯಲ್ಲಿ CCB ಬಿಗ್ ಕಾರ್ಯಾಚರಣೆ: ಕೊಲೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿ ಗಾಂಜಾ ಸಮೇತ ಬಂಧನ!

Share

ಬೆಳಗಾವಿ ನಗರದಲ್ಲಿ ಸಿಸಿಬಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಸಿಕ್ಕಿಬಿದ್ದಿದ್ದಾನೆ. ತಲೆಮರೆಸಿಕೊಂಡು ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಈತನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೆಳಗಾವಿ ನಗರದ ಸಿಸಿಬಿ ವಿಭಾಗದ ಪಿಐ ಮಂಜುನಾಥ ನಾಯಕ್ ಅವರ ನೇತೃತ್ವದ ತಂಡ ಜಯನಗರ ಪಂಟಬಾಳೆ ನಿವಾಸಿ ಆಕಾಶ್ ದಿಲೀಪ ದೊಡಮನಿ ಎಂಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ದಿನಾಂಕ 24/07/2026 ರಂದು ಕಾರ್ತಿಕ್ ಶಿರಗೂಪ್ ಎಂಬಾತನ ನೆರವಿನಿಂದ ಗೋವಾದಿಂದ ಗಾಂಜಾ ತಂದು ಜಾಂಬೋಟಿ ರಸ್ತೆ ಮಾರ್ಗವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಆರೋಪಿಯಿಂದ ₹80,000 ಮೌಲ್ಯದ 1 ಕೆಜಿ 704 ಗ್ರಾಂ ಗಾಂಜಾ ಹಾಗೂ ₹11,000 ಮೌಲ್ಯದ ಎರಡು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ (ಪ್ರ.ಸಂ. 137/2026) ಭಾಗಿಯಾಗಿ ತಲೆಮರೆಸಿಕೊಂಡಿದ್ದ ಈತನನ್ನು ಇದೀಗ ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Tags:

error: Content is protected !!