Vijaypura

ವಿಜಯಪುರದಲ್ಲಿ ಕಲಬೆರಕೆ ಹಾಲಿನ ಆತಂಕ: ಗುಣಮಟ್ಟ ಪರೀಕ್ಷೆ ಕಡ್ಡಾಯಕ್ಕೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆಗ್ರಹಿಸಿ ಮನವಿ

Share

ವಿಜಯಪುರ ಜಿಲ್ಲೆಯಲ್ಲಿ ರಾಸಾಯನಿಕ ಮಿಶ್ರಿತ ಕಲಬೆರಕೆ ಹಾಲು ಪೂರೈಕೆಯಾಗುತ್ತಿರುವ ಆತಂಕ ವ್ಯಕ್ತವಾಗಿದ್ದು, ಜನರ ಆರೋಗ್ಯದ ಹಿತದೃಷ್ಟಿಯಿಂದ ಹಾಲಿನ ಗುಣಮಟ್ಟ ಪರೀಕ್ಷೆಯನ್ನು ಪರಿಣಾಮಕಾರಿ ಯಾಗಿ ಕೈಗೊಳ್ಳುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ಜರುಗಿಸು ವಂತೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿದ ಅವರು, ಹಾಲು ಮಕ್ಕಳಿಂದ ವೃದ್ಧರವರೆಗೆ ಪ್ರತಿಯೊಬ್ಬರೂ ಸೇವಿಸುವ ಪ್ರಮುಖ ಆಹಾರವಾಗಿದೆ. ಆದರೆ ಕೆಲವರು ಹೆಚ್ಚಿನ ಲಾಭದಾಸೆಯಿಂದ ಹಾಲಿಗೆ ವಿವಿಧ ರಾಸಾಯನಿಕ ಗಳನ್ನು ಬೆರೆಸಿ ಪೂರೈಕೆ ಮಾಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಇದು ಸಾರ್ವಜನಿಕರ ಆರೋಗ್ಯ ಮತ್ತು ಜೀವಕ್ಕೆ ಅಪಾಯ ಉಂಟು ಮಾಡುವ ವಿಷಯ ವಾಗಿದೆ ಎಂದು ಹೇಳಿದರು. ವಿಜಯಪುರ ಜಿಲ್ಲೆ ಮಹಾರಾಷ್ಟ್ರ ರಾಜ್ಯದ ಗಡಿಯನ್ನು ಹಂಚಿಕೊಂಡಿ ರುವುದರಿಂದ ಗಡಿ ಭಾಗ ಸೇರಿದಂತೆ ವಿವಿಧ ಪ್ರದೇಶಗಳಿಂದ ಹಲವು ತಿಂಗಳುಗಳಿಂದ ರಾಸಾಯನಿಕ ಮಿಶ್ರಿತ ಹಾಲು ಜಿಲ್ಲೆಗೆ ಪೂರೈಕೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗುತ್ತಿದೆ ಎಂದು ಅವರು ತಿಳಿಸಿದರು.


ಯಾವುದೇ ಕಂಪನಿಯ ಪ್ಯಾಕೆಟ್ ಇಲ್ಲದೆ ಕ್ಯಾನ್‌ಗಳಲ್ಲಿ ಹಾಲು ತಂದು ಮನೆ ಮನೆಗೆ ವಿತರಿಸಲಾಗುತ್ತಿದೆ. ಇಂತಹ ಅಕ್ರಮಕ್ಕೆ ಕಡಿವಾಣ ಹಾಕಲು ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಾಲು ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿ, ವಿತರಕರು ಕಡ್ಡಾಯವಾಗಿ ಹಾಲಿನ ಗುಣಮಟ್ಟ ಪರೀಕ್ಷೆ ನಡೆಸಿದ ಬಳಿಕವೇ ವಿತರಣೆ ಮಾಡುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ನಿರ್ಜನ ಪ್ರದೇಶಗಳಲ್ಲಿ ರಾಸಾಯನಿಕ ಬಳಸಿ ಹಾಲು ತಯಾರಿಸಲಾಗುತ್ತಿದ್ದು, ಅದನ್ನು ಸೇವಿಸುವ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅಕ್ರಮದಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು. ಬೈಟ್:

ಈ ಸಂದರ್ಭದಲ್ಲಿ ಜಗದೀಶ ಮುಚ್ಚಂಡಿ, ಸಿದ್ಧು ಮಲ್ಲಿಕಾರ್ಜುನಮಠ, ವಿನಾಯಕ ದಹಿಂಡೆ, ವಿವೇಕ ತಾವರಗೇರಿ, ಕಾಂತು ಶಿಂಧೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!