ಕುಮಾರಸ್ವಾಮಿ ಅವರು ಮೊದಲು ಪ್ರಧಾನಮಂತ್ರಿ ಹಾಗೂ ಕೇಂದ್ರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಿ. ಈ ಯೋಜನೆ ಬಗ್ಗೆ ಮಾಹಿತಿ ಪಡೆದು ನಂತರ ಮಾತನಾಡಲಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನದಿ ಜೋಡಣೆ ವಿಚಾರ ರಿಯಲ್ ಎಸ್ಟೇಟ್ ವ್ಯವಹಾರವಲ್ಲ, ನೀರಿನ ಪ್ರಮಾಣ ನಿಗದಿಯಾಗಬೇಕು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಯಾವ ಸಮಯದಲ್ಲಿ ಯಾರಿಗೆ ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ತಿಳಿಸಿದರು.ನದಿ ಜೋಡಣೆ ಎಂದರೆ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ನಡೆಸುವ ಹಾಗೆ ಅಲ್ಲ. ನಿಮಗೆ ಮಾಹಿತಿ ಇಲ್ಲದಿದ್ದರೆ ನೀರಾವರಿ ತಜ್ಞರು ಅಥವಾ ಇಲಾಖೆಯ ಎಂಜಿನಿಯರ್ಗಳಿಂದ ಅಥವಾ ರಾಜ್ಯದ ಪರ ವಕಾಲತ್ತು ವಹಿಸುವ ವಕೀಲರ ಬಳಿ ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಮಾಧ್ಯಮಗಳಿಗೆ ಹೇಳಿಕೆ ನೀಡಿ ನಗೆಪಾಟಲಿಗೆ ತುತ್ತಾಗಿದ್ದೀರಿ ಎಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರು ಕೃಷ್ಣಾ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆ ಬಗ್ಗೆ ತೀರ್ಮಾನ ಮಾಡಲಾಗಿದೆ ಹಾಗೂ ಅದಕ್ಕೆ ರಾಜ್ಯದ ಸಮ್ಮತಿ ಇದೆ ಎಂದು ಹೇಳಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಮುಖ್ಯಮಂತ್ರಿಗೆ ಗೊತ್ತಿರಲಿ. ನದಿ ಜೋಡಣೆ ಮಾಡುವುದು, ನೀರು ಹಂಚಿಕೆ ಮಾಡುವುದು ಬೆಂಗಳೂರಿನಲ್ಲಿ ಕೂತು ರಿಯಲ್ ಎಸ್ಟೇಟ್ ಮಾಡಿದ ಹಾಗಲ್ಲ. ಇದು ಅತ್ಯಂತ ಸೂಕ್ಷ್ಮ ವಿಚಾರ, ಅತ್ಯಂತ ಜವಾಬ್ದಾರಿತವಾಗಿ ಹೇಳಿಕೆ ನೀಡಬೇಕು. ಈ ಮುಖ್ಯಮಂತ್ರಿಗೆ ಆ ರೀತಿಯ ಯಾವುದೇ ಜವಾಬ್ದಾರಿ, ಹೊಣೆಗಾರಿಕೆ ಗೊತ್ತಿದ್ದಂತೆ ಇಲ್ಲ ಎಂದು ಹರಿಹಾಯ್ದಿದ್ದರು.
ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಯುವಕರಲ್ಲಿ ಹಾಗೂ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪೊಲೀಸರಿಗೆ ಸಹಕಾರ ನೀಡಬೇಕು. ಹೀಗಾಗಿ ಪೊಲೀಸ್ ಇಲಾಖೆಯಿಂದ ‘ಬೇಡ ಬ್ರೋ’ ಅಭಿಯಾನ ನಡೆಸುತ್ತಿದೆ ಎಂದರು.
