Uncategorized

*ಸಂಸತ್ ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ*

Share

ಸಂಸತ್‌ನ ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ರಾಷ್ಟ್ರೀಯ ಮಹಿಳಾ ಮೀಸಲಾತಿ ಒಕ್ಕೂಟದ ರಾಜ್ಯಾಧ್ಯಕ್ಷೆ ಮಲ್ಲಮ್ಮ ಯಾಳವಾರ ಆಗ್ರಹಿಸಿದರು.

ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನ ಉಭಯ ಸದನಗಳ ಅನುಮೋದನೆ ದೊರೆತಿದ್ದರೂ, ಇದುವರೆಗೆ ಜಾರಿಗೆ ತರದಿರುವುದು ಮಹಿಳೆಯರ ನಿರೀಕ್ಷೆಗೆ ಧಕ್ಕೆ ತಂದಿದೆ ಎಂದು ಹೇಳಿದರು.
ದೇಶದ ಜನಸಂಖ್ಯೆಯಲ್ಲಿ ಮಹಿಳೆಯರ ಪಾಲು ಅರ್ಧದಷ್ಟಿದ್ದು, ರಾಜಕೀಯ ಕ್ಷೇತ್ರದಲ್ಲಿ ಅವರಿಗೆ ಸಮರ್ಪಕ ಪ್ರಾತಿನಿಧ್ಯ ಸಿಗಬೇಕಾಗಿದೆ. ಆದ್ದರಿಂದ ಕೇಂದ್ರ ಸರ್ಕಾರವು ಯಾವುದೇ ವಿಳಂಬ ಮಾಡದೆ ಮುಂಗಾರು ಅಧಿವೇಶನದಲ್ಲೇ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೊಳಿಸಿ, ಮಹಿಳೆಯರಿಗೆ ರಾಜಕೀಯವಾಗಿ ಸಮಾನ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

 

Tags:

error: Content is protected !!