Khanapur

ಖಾನಾಪುರದಲ್ಲಿ ರಸ್ತೆಗಳ ಭೀಕರ ದುಸ್ಥಿತಿ: ಬೇಕವಾಡ ಕ್ರಾಸ್ – ಬೀಡಿ ಕ್ರಾಸ್ ಮಾರ್ಗ ಪೂರ್ತಿ ಗುಂಡಿಮಯ!

Share

ಖಾನಾಪುರ ತಾಲೂಕಿನಲ್ಲಿ ಮುಂಗಾರು ಮಳೆಯಿಂದಾಗಿ ರಸ್ತೆಗಳ ದುಸ್ಥಿತಿ ತಲುಪಿದ್ದು, ಬೇಕವಾಡ ಕ್ರಾಸ್‌ನಿಂದ ಬೀಡಿ ಕ್ರಾಸ್‌ವರೆಗಿನ ರಸ್ತೆ ಸಂಪೂರ್ಣವಾಗಿ ಗುಂಡಿಮಯವಾಗಿದೆ. ಸುಮಾರು 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬಿದ್ದಿರುವ ಭಾರಿ ಗುಂಡಿಗಳಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅತಿ ಹೆಚ್ಚು ಮಳೆ ಬೀಳುವ ಖಾನಾಪುರ ತಾಲೂಕಿನಲ್ಲಿ ಪ್ರಚಂಡ ಮಳೆಗೆ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಬೇಕವಾಡ ಕ್ರಾಸ್‌ನಿಂದ ಬಿಡಿ ಕ್ರಾಸ್‌ವರೆಗಿನ 5 ಕಿಲೋಮೀಟರ್ ರಸ್ತೆಯಲ್ಲಿ ಎರಡೆರಡು ಅಡಿಯಷ್ಟು ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಜೀವ ಭಯದಲ್ಲೇ ಸರ್ಕಸ್ ಮಾಡುತ್ತಾ ಸಂಚರಿಸುವಂತಾಗಿದೆ. ರಸ್ತೆ ಹಾಳಾದ ಪರಿಣಾಮ ಈ ಭಾಗದಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲೂ ತೀವ್ರ ವಿಳಂಬವಾಗುತ್ತಿದ್ದು, ಪ್ರಯಾಣಿಕರು ನಿತ್ಯ ಪರದಾಡುವಂತಾಗಿದೆ. ರಸ್ತೆ ದುರಸ್ತಿಗೆ ಒತ್ತಾಯಿಸಿ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದು, ಕೂಡಲೇ ರಸ್ತೆ ದುರಸ್ತಿ ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!