Khanapur

ಇ-ಕೆವೈಸಿಗೆ ಹಣ ನೀಡಬೇಡಿ: ಲೈಸೆನ್ಸ್ ರದ್ದುಗೊಳಿಸುವ ಎಚ್ಚರಿಕೆ ನೀಡಿದ ಸೂರ್ಯಕಾಂತ ಕುಲಕರ್ಣಿ!

Share

ಖಾನಾಪುರ ತಾಲೂಕಿನ ರೇಷನ್ ಕಾರ್ಡ್‌ದಾರರ ಗಮನಕ್ಕೆ! ಇ-ಕೆವೈಸಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಯಾವುದೇ ಕಾರಣಕ್ಕೂ ಹಣ ನೀಡಬಾರದು ಎಂದು ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸೂರ್ಯಕಾಂತ ಕುಲಕರ್ಣಿ ಮನವಿ ಮಾಡಿದ್ದಾರೆ.

ಖಾನಾಪುರ ತಾಲೂಕಿನಲ್ಲಿ ಪ್ರಸ್ತುತ ನಡೆಯುತ್ತಿರುವ ರೇಷನ್ ಕಾರ್ಡ್‌ಗಳ ಇ-ಕೆವೈಸಿ (e-KYC) ಪ್ರಕ್ರಿಯೆಯು ಸರ್ಕಾರದಿಂದ ಸಂಪೂರ್ಣವಾಗಿ ಉಚಿತವಾಗಿದ್ದು, ಸಾರ್ವಜನಿಕರು ಅಂಗಡಿದಾರರಿಗೆ ಒಂದು ರೂಪಾಯಿ ಕೂಡ ನೀಡಬಾರದು ಎಂದು ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸೂರ್ಯಕಾಂತ ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ. ಇ-ಕೆವೈಸಿ ಪೂರ್ಣಗೊಳ್ಳದಿದ್ದರೆ ಅಂಗಡಿದಾರರಿಗೆ ರೇಷನ್ ಕೋಟಾ ಸಿಗದ ಕಾರಣ, ಉಚಿತವಾಗಿ ಪ್ರಕ್ರಿಯೆ ಪೂರ್ಣಗೊಳಿಸುವುದು ಅವರದ್ದೇ ಜವಾಬ್ದಾರಿಯಾಗಿದೆ. ಒಂದು ವೇಳೆ ಹಣ ಪಡೆದಿರುವುದು ಕಂಡುಬಂದರೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಯ ಪರವಾನಗಿಯನ್ನೇ (ಲೈಸೆನ್ಸ್) ರದ್ದುಗೊಳಿಸಲು ಶಿಫಾರಸು ಮಾಡುವುದಾಗಿ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ವಂಚನೆಗೆ ಒಳಗಾಗದೇ, ಅಂಗಡಿದಾರರು ಹಣಕ್ಕೆ ಬೇಡಿಕೆ ಇಟ್ಟರೆ ತಕ್ಷಣವೇ ಗ್ಯಾರಂಟಿ ಯೋಜನೆಯ ಅಧ್ಯಕ್ಷರಿಗೆ ಅಥವಾ ಸದಸ್ಯರಿಗೆ ದೂರು ನೀಡಬೇಕೆಂದು ಮನವಿ ಮಾಡಿದ್ದಾರೆ.

Tags:

error: Content is protected !!