Belagavi

ಗ್ಯಾರಂಟಿ ಯೋಜನೆಗಳ ಮನೆಮನೆ ಸಮೀಕ್ಷೆ : ಬೆಳಗಾವಿ ಗ್ಯಾರೆಂಟಿ ಅಧ್ಯಕ್ಷ ವಿನಯ್ ನಾವಲಗಟ್ಟಿ

Share

ಗ್ಯಾರಂಟಿ ಯೋಜನೆಗಳ ಕುರಿತು ಸರ್ಕಾರ ಈಗಾಗಲೇ ಕಳೆದ ಮೂರು ವರ್ಷಗಳಿಂದ ಪ್ರತಿಯೊಬ್ಬ ಫಲಾನುಭವಿಗೂ ಯೋಜನೆಗಳ ಪ್ರಯೋಜನ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ ಕೆಲವು ಯೋಜನೆಗಳಲ್ಲಿ ಅರ್ಹರಿಗೆ ಸೌಲಭ್ಯಗಳು ತಲುಪದೇ ಇರುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಸರ್ಕಾರ ಸಮೀಕ್ಷೆ ಕಾರ್ಯ ಆರಂಭಿಸಿದೆ.

ಯಾರು ನಿಜವಾದ ಫಲಾನುಭವಿಗಳು, ಯಾರಿಗೆ ಯೋಜನೆಗಳ ಸೌಲಭ್ಯ ಸಿಗಬೇಕು ಹಾಗೂ ರಾಜ್ಯದ ಅರ್ಹ ನಾಗರಿಕರಿಗೆ ಮಾತ್ರ ಪ್ರಯೋಜನ ದೊರೆಯಬೇಕು ಎಂಬ ಉದ್ದೇಶದಿಂದ ನಮ್ಮ ಇಲಾಖೆ, ಎಸ್ಕಾಂ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಪದಾಧಿಕಾರಿಗಳು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ.

ಈ ಸಮೀಕ್ಷೆಗಾಗಿ ವಿಶೇಷ ಫಾರ್ಮ್ ಸಿದ್ಧಪಡಿಸಲಾಗಿದ್ದು, ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಧಿಕಾರಿಗಳು ಪ್ರತಿಯೊಂದು ಮಾಹಿತಿಯನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳು ಸರಿಯಾದ ರೀತಿಯಲ್ಲಿ ಪ್ರತಿಯೊಬ್ಬರಿಗೂ ತಲುಪಬೇಕು ಎಂಬುದು ಮಾನ್ಯ ಮುಖ್ಯಮಂತ್ರಿಗಳ ಆಶಯವಾಗಿದೆ. ಈ ಉದ್ದೇಶದೊಂದಿಗೆ ಸರ್ಕಾರದ ಸಿಬ್ಬಂದಿ ಹಾಗೂ ಗ್ಯಾರಂಟಿ ಯೋಜನೆಗಳ ಪದಾಧಿಕಾರಿಗಳು ಸಮೀಕ್ಷಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಇಂದು ರಾಮತೀರ್ಥ ಬಡಾವಣೆಯಲ್ಲಿ ಮನೆ ಮನೆಗೆ ತೆರಳಿ ಫಲಾನುಭವಿಗಳ ಸಮೀಕ್ಷೆ ನಡೆಸಲಾಗುತ್ತಿದೆ. ಎಂದು ಬೆಳಗಾವಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ವಿನಯ್ ನಾವಲಗಟ್ಟಿ ಹೇಳಿದರು ಈ ಸಂದರ್ಭದಲ್ಲಿ

ಮುಖ್ಯ ಇಂಜಿನಿಯರ್ ಪ್ರವೀಣ್ ಕುಮಾರ್ ಚಿಕ್ಕಡೆ,
ಅರವಿಂದ್ ಗದಗಕರ್ ಕಾರ್ಯನಿರ್ವಾಹಕ ಅಧಿಕಾರಿ,
ಸಂಜಯ್ Gonsalves ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ , ಶೀತಲ್ ಸನದಿ ಸಹಾಯಕ ಎಂಜಿನಿಯರ್, ಹಾಗೂ ಹೆಸ್ಕಾಂ ಕರ್ಮಚಾರಿ ಉಪಸ್ಥಿತರಿದ್ದರು

Tags:

error: Content is protected !!